ಪೊಲೀಸರ ಮೇಲೆ ಹಲ್ಲೆಗೆ ಮುಂದಾದ ಆರೋಪಿಗೆ ಗುಂಡೇಟು
ಹುಬ್ಬಳ್ಳಿ: ಪೊಲೀಸರ ಮೇಲೆ ಹಲ್ಲೆಗೆ ಮುಂದಾದ ದರೋಡೆಕೋರನಿಗೆ ಗುಂಡೇಟು ನೀಡಿದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.
ಗುಂಡೇಟು ತಿಂದ ಆರೋಪಿಯನ್ನು ಹೈದರಾಬಾದ್ ಮೂಲದ ಫರ್ಹಾನ್ ಶೇಖ್ ಎಂದು ಗುರುತಿಸಲಾಗಿದೆ. ಆರೋಪಿ ಕೇಶ್ವಾಪುರ ವ್ಯಾಪ್ತಿಯಲ್ಲಿ ಚಿನ್ನದ ಅಂಗಡಿ ಕಳ್ಳತನ ಮಾಡಿದ್ದ.
ಈತನನ್ನು ಗುರುವಾರ ಬಂಧಿಸಲಾಗಿತ್ತು. ಅಲ್ಲದೇ ವಿವಿಧ ರಾಜ್ಯಗಳಲ್ಲಿ ನಡೆದ ಕೊಲೆ, ಡಕಾಯಿತಿ ಮತ್ತು ದರೋಡೆ ಪ್ರಕರಣದಲ್ಲಿ ಆರೋಪಿ ಭಾಗಿಯಾಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.




