May 11, 2026

ರೈಲಿಗೆ ತಲೆಕೊಟ್ಟು ಪತ್ರಕರ್ತೆ ಆತ್ಮಹತ್ಯೆ

0
image_editor_output_image84013413-1721973377795.jpg

ಭುವನೇಶ್ವರ: ಮಹಿಳಾ ಪತ್ರಕರ್ತೆಯೊಬ್ಬರು ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಒಡಿಶಾದ ಭುವನೇಶ್ವರದಲ್ಲಿ ಸಂಭವಿಸಿದೆ.

ಸಾವಿಗೂ ಮುನ್ನ ವಿಡಿಯೋ ಮಾಡಿಕೊಂಡಿದ್ದು, ವಿಡಿಯೋದಲ್ಲಿ ಪತಿಯ ಕಿರುಕುಳದ ಬಗ್ಗೆ ಹೇಳಿಕೊಂಡಿದ್ದಾಳೆ. ಮೃತ ಮಧುಮಿತಾ ಪರಿದಾ (28) ಸ್ಥಳೀಯ ಸುದ್ದಿ ಮಾಧ್ಯಮದಲ್ಲಿ ಕಾಪಿ ಎಡಿಟರ್ ಆಗಿ ಕೆಲಸ ಮಾಡುತ್ತಿದ್ದು, ಮೂರು ತಿಂಗಳ ಹಿಂದೆ ಮದುವೆಯಾಗಿದ್ದರು.

ಸಾವಿಗೂ ಮುನ್ನ ತನ್ನ ಪತಿಯಿಂದ ಉಂಟಾದ ಕಿರುಕುಳ ಬಗ್ಗೆ ಹೇಳಿಕೊಂಡಿದ್ದು, ಈ ವಿಡಿಯೋವನ್ನು ಸೋಶಿಯಲ್ ಮೀಡಿಯಾಗಳಲ್ಲಿ ಹಂಚಿಕೊಂಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!