ಚಿಕ್ಕಮಗಳೂರು: ರಾಷ್ಟ್ರೀಯ ಹೆದ್ದಾರಿಗೆ ಉರುಳಿ ಬಿದ್ದ ಬೃಹತ್ ಗಾತ್ರದ ಮರ: ಕಾರುಗಳು ಜಖಂ
ಚಿಕ್ಕಮಗಳೂರು: ಕಾಫಿನಾಡಿನಲ್ಲಿ ಗಾಳಿ ಮಳೆಯ ಆರ್ಭಟ ಜೋರಾಗಿದ್ದು ಪರಿಣಾಮ ಬೃಹತ್ ಗಾತ್ರದ ಮರವೊಂದು ರಾಷ್ಟ್ರೀಯ ಹೆದ್ದಾರಿ ಮೇಲೆ ಉರುಳಿ ಬಿದ್ದ ಪರಿಣಾಮ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ಎರಡು ಕರುಗಳು ಜಖಂಗೊಂಡಿರುವ ಘಟನೆ ಚಿಕ್ಕಮಗಳೂರು ನಗರದ ಹೊರವಲಯದ ಗವನಹಳ್ಳಿ ಬಳಿ ನಡೆದಿದೆ.
ಕಡೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಅವಘಡ ಸಂಭವಿಸಿದ್ದು ಪರಿಣಾಮ ವಾಹನ ಸಂಚಾರ ಅಸ್ತವ್ಯಸ್ಥಗೊಂಡಿದೆ.
ಕಳೆದೆರಡು ದಿನಗಳಿಂದ ಗಾಳಿ ಮಳೆ ಜೋರಾಗಿದ್ದು ಗವನಹಳ್ಳಿ ಬಳಿ ಬೃಹತ್ ಗಾತ್ರದ ಮರ ಹೆದ್ದಾರಿಗೆ ಅಡ್ಡಲಾಗಿ ಬಿದ್ದಿದೆ ಈ ವೇಳೆ ಇದೆ ಮಾರ್ಗವಾಗಿ ಸಂಚರಿಸುತ್ತಿದ್ದ ಎರಡು ಕಾರುಗಳು ಜಖಂಗೊಂಡಿವೆ.
ಸ್ವಲ್ಪ ಹೆಚ್ಚು ಕಮ್ಮಿಯಾಗಿದ್ದರು ದೊಡ್ಡ ಅನಾಹುತ ಸಂಭವಿಸುತ್ತಿತ್ತು ಎನ್ನಲಾಗಿದ್ದು ಕಾರಿನಲ್ಲಿದ್ದ ಪ್ರಯಾಣಿಕರು ಅದೃಷ್ಟವಶಾತ್ ಪ್ರಾಣಾಪಾಯವಿಲ್ಲದೆ ಪಾರಾಗಿದ್ದಾರೆ.




