September 27, 2026

ಉಳ್ಳಾಲ: ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಭೇಟಿಯಾದ ಉಳ್ಳಾಲ ದರ್ಗಾ ಸಮಿತಿ ನಿಯೋಗ

0
image_editor_output_image765984076-1721984203141.jpg

ಉಳ್ಳಾಲ : ಉಳ್ಳಾಲ ಕೇಂದ್ರ ಜುಮಾ ಮಸೀದಿ ವಠಾರದಲ್ಲಿ ನಡೆಯಲಿರುವ ಉಳ್ಳಾಲ ಖಾಝಿ ಅಧಿಕಾರ ಸ್ವೀಕಾರ ಮತ್ತು ಶರೀಅತ್ ಕಾಲೇಜು ವಿದ್ಯಾರ್ಥಿಗಳ ಹಾಸ್ಟೆಲ್‌ ಕಟ್ಟಡ ಶಿಲಾನ್ಯಾಸ ಕಾರ್ಯಕ್ರಮ ಪ್ರಯುಕ್ತ ಉಳ್ಳಾಲ ದರ್ಗಾ ಸಮಿತಿ ನಿಯೋಗವು ರಾಜ್ಯದ ವಿಧಾನಸಭಾಧ್ಯಕ್ಷರಾದ ಯು.ಟಿ ಖಾದರ್ ಸಮ್ಮುಖ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿ ಮಾಡಿ ಕಾರ್ಯಕ್ರಮಕ್ಕೆ ಆಹ್ವಾನಿಸಿದರು.

ಆ. 17ರಂದು ಸಂಜೆ ನಾಲ್ಕು ಗಂಟೆಗೆ ಇಂಡಿಯನ್ ಗ್ರಾಂಡ್ ಮುಪ್ತಿ ಸುಲ್ತಾನುಲ್ ಉಲಮಾ ಕಾಂದಪುರಂ ಎ.ಪಿ ಅಬೂಬಕ್ಕ‌ರ್ ಮುಸ್ಲಿಯಾರ್ ಉಳ್ಳಾಲ ಖಾಝಿಯಾಗಿ ಅಧಿಕಾರ ಸ್ವೀಕಾರ ಮಾಡಲಿದ್ದಾರೆ ಹಾಗೂ ಶರೀಅತ್ ಕಾಲೇಜು ವಿದ್ಯಾರ್ಥಿಗಳ ಹಾಸ್ಟೆಲ್‌ ಕಟ್ಟಡ ಶಿಲಾನ್ಯಾಸ ಕಾರ್ಯಕ್ರಮ ದರ್ಗಾ ವಠಾರದಲ್ಲಿ ನಡೆಯಲಿದೆ.

 

ದರ್ಗಾ ಅಧ್ಯಕ್ಷರಾದ ಬಿ.ಜಿ ಹನೀಫ್ ಹಾಜಿ, ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಶಿಹಾಬುದ್ದೀನ್‌ ಸಖಾಫಿ, ಕೋಶಾಧಿಕಾರಿ ನಾಝಿಮ್ ರಹ್ಮಾನ್, ಮಾಜಿ ದರ್ಗಾ ಅಧ್ಯಕ್ಷರಾದ ಕಣಚೂರು ಮೋನು ಹಾಜಿ, ಸದಸ್ಯರಾದ ಅಬ್ದುಲ್ ಖಾದ‌ರ್ ಅವುದಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

You may have missed

error: Content is protected !!