March 25, 2026

ಭಾರಿ ಮಳೆಯಿಂದ ಚಾರ್ಮಾಡಿ ಘಾಟ್ ನಲ್ಲಿ ಗುಡ್ಡ ಕುಸಿತ

0
image_editor_output_image1724177056-1722060617043.jpg

ಚಾರ್ಮಾಡಿ: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್‌ನಲ್ಲಿ ಗುಡ್ಡ ಕುಸಿದು ಟ್ರಾಫಿಕ್ ಜಾಮ್ ಆದ ಘಟನೆ ನಿನ್ನೆ ತಡರಾತ್ರಿ ಸಂಭವಿಸಿದೆ.

ದಕ್ಷಿಣ ಕನ್ನಡ ಜಿಲ್ಲೆ ವ್ಯಾಪ್ತಿಯ ಚಾರ್ಮಾಡಿಘಾಟ್‌ನ 10ನೇ ತಿರುವಿನಲ್ಲಿ ಗುಡ್ಡ ಕುಸಿದಿದ್ದು ಚಾರ್ಮಾಡಿ ಘಾಟ್ನಿಂದ ಕೊಟ್ಟಿಗೆಹಾರದವರೆಗೂ ವಾಹನಗಳು ನಿಂತಲ್ಲೇ ನಿಂತಿದ್ದವು. ಬಳಿಕ ಜೆಸಿಬಿ ಮೂಲಕ ಮಣ್ಣು ತೆರವು ಕಾರ್ಯಾಚರಣೆ ನಡೆಸಲಾಯ್ತು.

ಅತ್ತ ಮಂಗಳೂರಿಗೆ ತೆರಳುವವರನ್ನು ಪೊಲೀಸರು ಚಿಕ್ಕಮಗಳೂರಿನ ಕೊಟ್ಟಿಗೆಹಾರದಲ್ಲೇ ವಾಹನಗಳನ್ನು ತಡೆದು ವಾಪಸ್ ಕಳಿಸಿದ್ದಾರೆ. ಅತ್ತ ಉಜಿರೆ ಬಳಿಯೂ ಚಾರ್ಮಾಡಿ ಘಾಟ್ ಪ್ರವೇಶ ನಿರ್ಬಂಧಿಸಲಾಗಿತ್ತು.

Leave a Reply

Your email address will not be published. Required fields are marked *

error: Content is protected !!