ಶ್ಯಾಮ್ ಪ್ರಸಾದ್ ಶಾಸ್ತ್ರಿ ಆತ್ಮಹತ್ಯೆ ಪ್ರಕರಣ: ರಾಘವೇಶ್ವರ ಭಾರತೀ ಸ್ವಾಮೀಜಿ, ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧದ ಆರೋಪ ರದ್ದು
ಬೆಂಗಳೂರು: ಶ್ಯಾಮ್ ಪ್ರಸಾದ್ ಶಾಸ್ತ್ರಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಸ್ವಾಮೀಜಿ ಮತ್ತು ಆರ್ ಎಸ್ ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧದ ದೋಷಾರೋಪಣೆ ಪಟ್ಟಿ ರದ್ದುಪಡಿಸಿ ಹೈಕೋರ್ಟ್ ನೀಡಿರುವ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಲು ‘ಯೋಗ್ಯ ಪ್ರಕರಣವಲ್ಲ’ ಎಂದು ರಾಜ್ಯ ಕಾಂಗ್ರೆಸ್ ಸರ್ಕಾರವು ತೀರ್ಮಾನಿಸಿದೆ ಎಂದು “the-file.in” ವರದಿ ಮಾಡಿದೆ.





