ಪೊಲೀಸರ ವಿಚಾರಣೆ ವೇಳೆ ಏಕಾಏಕಿ ಕುಸಿದು ಬಿದ್ದ ಪುನೀತ್ ಕೆರೆಹಳ್ಳಿ
ಬೆಂಗಳೂರು: ಸರ್ಕಾರಿ ನೌಕರರ ಕೆಲಸಕ್ಕೆ ಅಡ್ಡಿಪಡಿಸಿದ ಹಾಗೂ ಶಾಂತಿ ಸುವ್ಯವಸ್ಥೆಗೆ ಭಂಗ ತಂದ ಆರೋಪದ ಮೇಲೆ ಬಂಧನಕ್ಕೊಳಗಾದ ಸಂಘಪರಿವಾರದ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ಪೊಲೀಸರ ವಿಚಾರಣೆ ವೇಳೆ ಏಕಾಏಕಿ ಕುಸಿದು ಬಿದ್ದಿದ್ದಾನೆ. ಆತನನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.
ನಾಯಿ ಮಾಂಸದ ಜೊತೆಗೆ ಕುರಿ ಮಾಂಸವನ್ನು ರಾಜಸ್ಥಾನದಿಂದ ಬೆಂಗಳೂರಿಗೆ ತಂದು ಮಾರಾಟ ಮಾಡುತ್ತಿದ್ದಾರೆ ಎಂದು ಪುನೀತ್ ಕೆರೆಹಳ್ಳಿ ತನ್ನ ಗೂಂಡಾಗಳೊಂದಿಗೆ ಮೆಜೆಸ್ಟಿಕ್ ರೈಲು ನಿಲ್ದಾಣದ ಬಳಿ ಗಲಾಟೆ ಮಾಡಿದ್ದನು. ಈ ವೇಳೆ ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಆರೋಪದ ಅಡಿಯಲ್ಲಿ ಅವರ ವಿರುದ್ಧ ಪ್ರಕರಣ ದಾಖಲಾಗಿತ್ತು.





