September 17, 2024

ಬಂಟ್ವಾಳ: ದೇವಸ್ಥಾನಕ್ಕೆ ನುಗ್ಗಿದ ಕಳ್ಳರು ಚಿನ್ನಾಭರಣ ದೋಚಿ ಪರಾರಿ

0

ಬಂಟ್ವಾಳ: ಮೂಡುನಡುಗೋಡು ಗ್ರಾಮದ ಕರೆಂಕಿ ಎಂಬಲ್ಲಿರುವ ದುರ್ಗಾಪರಮೇಶ್ವರಿ ದೇವಸ್ಥಾನದಿಂದ ಸುಮಾರು 2.5 ಪವನ್ ತೂಕದ 1.40.000 ಸಾವಿರ ಮೌಲ್ಯದ ಚಿನ್ನದ ಕರಿಮಣಿ ಮತ್ತು ದೇವಸ್ಥಾನದ ಒಳಾಂಗಣದಲ್ಲಿದ್ದ ಕಾಣಿಕೆ ಡಬ್ಬಿಯಿಂದ ಅಂದಾಜು ರೂ.2000 ಹಣವನ್ನು ಕಳವು ಮಾಡಿದ ಬಗ್ಗೆ ಠಾಣೆಗೆ ದೂರು ನೀಡಲಾಗಿದೆ.

ಒಟ್ಟು 1.42,000 ಸಾವಿರ ಮೌಲ್ಯದ ಸೊತ್ತುಗಳನ್ನು ಕಳವು ಮಾಡಲಾಗಿದೆ.
ದೇವಸ್ಥಾನದ ಹಿಂಬಾಗಿಲು ತೆರದು ಗರ್ಭಗುಡಿಗೆ ನುಗ್ಗಿದ ಕಳ್ಳರು ಗರ್ಭಗುಡಿಯಲ್ಲಿದ್ದ ದೇವರ ಮೂರ್ತಿಗೆ ಧರಿಸಿದ್ದ ಚಿನ್ನದ ಕರಿಮಣಿ ಸರ ಹಾಗೂ ಡಬ್ಬಿಯಲ್ಲಿದ್ದ ಹಣವನ್ನು ಕಳವು ಮಾಡಿದ್ದಾರೆ.
ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯ ಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸ್ ಇನ್ಸ್ ಪೆಕ್ಟರ್ ಶಿವಕುಮಾರ್ ಹಾಗೂ ಎಸ್.ಐ.ಹರೀಶ್ ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!