March 18, 2026

ಗಾಝಾ ಶಾಲೆಯ ಮೇಲೆ ಇಸ್ರೇಲ್ ವೈಮಾನಿಕ ದಾಳಿ: 30 ಮೃತ್ಯು, 100 ಕ್ಕೂ ಹೆಚ್ಚು ಗಾಯ

0
n62396482617221430758744302cbffa5d6d0753f050593c419c979d8c4f99d3929b73e6fc4a7d0ba57bd38.jpg

ಗಾಝಾ: ದೇರ್ ಅಲ್ ಬಾಲಾಹ್ ಶಾಲೆಯ ಮೇಲೆ ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯಲ್ಲಿ ಕನಿಷ್ಠ 30 ಫೆಲೆಸ್ತೀನೀಯರು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ.

ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯಲ್ಲಿ 100ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಗಾಝಾ ಆರೋಗ್ಯ ಸಚಿವಾಲಯ ಮತ್ತು ಹಮಾಸ್ ನಡೆಸುತ್ತಿರುವ ಸರ್ಕಾರಿ ಮಾಧ್ಯಮಗಳನ್ನ ಉಲ್ಲೇಖಿಸಿ ವರದಿಗಳು ತಿಳಿಸಿವೆ.

ಮಧ್ಯ ಗಾಝಾದ ಖದೀಜಾ ಶಾಲೆಯ ಕಾಂಪೌಂಡ್ ಒಳಗಿರುವ ಹಮಾಸ್ ಕಮಾಂಡ್ ಮತ್ತು ನಿಯಂತ್ರಣ ಕೇಂದ್ರವನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿರುವುದಾಗಿ ಇಸ್ರೇಲ್ ಸೇನೆ ಹೇಳಿದೆ.

Leave a Reply

Your email address will not be published. Required fields are marked *

error: Content is protected !!