ರೈಲು ನಿಲ್ದಾಣದ ಬಳಿಯ ಪೊದೆಯಲ್ಲಿ ಯುವತಿಯ ಮೃತದೇಹ ಪತ್ತೆ
ಮುಂಬೈ: 20ರ ಹರೆಯದ ಯುವತಿಯೊಬ್ಬಳನ್ನು ಆಕೆಯ ಪ್ರಿಯಕರನೇ ಬರ್ಬರವಾಗಿ ಇರಿದು ಕೊಂದು, ಆಕೆಯ ಶವವನ್ನು ರೈಲ್ವೆ ನಿಲ್ದಾಣದ ಬಳಿಯ ಪೊದೆಯಲ್ಲಿ ಎಸೆದಿರುವ ಘಟನೆ ಮುಂಬೈನಲ್ಲಿ ನಡೆದಿದೆ.
ಘಟನೆಯ ಕುರಿತು ಉಪ ಪೊಲೀಸ್ ಆಯುಕ್ತ (ನವಿ ಮುಂಬೈ) ವಿವೇಕ್ ಪನ್ಸಾರೆ ಪ್ರತಿಕ್ರಿಯಿಸಿ, ಉರಾನ್ ರೈಲು ನಿಲ್ದಾಣದ ಬಳಿಯ ಪೊದೆಯಲ್ಲಿ ಯುವತಿಯ ಮೃತದೇಹ ಪತ್ತೆಯಾಗಿದೆ ಎಂದು ಬೆಳಗಿನ ಜಾವ 2 ಗಂಟೆಯ ಸುಮಾರಿಗೆ ಪೊಲೀಸರಿಗೆ ಕರೆ ಬಂದಿತ್ತು.
ಆಕೆಯ ಮೃತದೇಹ ಅನೇಕ ಗಾಯದ ಗುರುತುಗಳು ಮತ್ತು ಇರಿತದ ಗಾಯಗಳನ್ನು ಒಳಗೊಂಡಿದೆ. ಇದು ಆಕೆಯನ್ನು ಅತ್ಯಂತ ಬರ್ಬರವಾಗಿ ಹತ್ಯೆಗೈಯಲಾಗಿದೆ ಎಂದು ಸೂಚಿಸುತ್ತದೆ ಎಂದು ತಿಳಿಸಿದ್ದಾರೆ.





