2024ರ ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಭಾರತ ಪದಕ ಪಟ್ಟಿಯಲ್ಲಿ ಖಾತೆ ತೆರೆದಿದೆ. 10 ಮೀಟರ್ ವನಿತಾ ಏರ್ ಪಿಸ್ತೂಲ್ ವಿಭಾಗದಲ್ಲಿ ಭಾರತದ ಮನು ಭಾಕರ್ ಕಂಚು ಗೆದ್ದು ಸಂಭ್ರಮಿಸಿದ್ದಾರೆ.
ಚಿನ್ನ ಹಾಗೂ ಬೆಳ್ಳಿ ಕೊರಿಯಾದ ಇಬ್ಬರ ಪಾಲಾಯಿತು. ಒಲಿಂಪಿಕ್ ಶೂಟಿಂಗ್ ನಲ್ಲಿ ಪದಕ ಗೆದ್ದ ಭಾರತದ ಮೊದಲ ವನಿತಾ ಶೂಟರ್ ಎಂಬ ದಾಖಲೆ 22ರ ಹರೆಯದ ಮನು ಭಾಕರ್ ಪಾಲಾಯಿತು.
