ವಿವಾಹಿತ ಮಹಿಳೆ ನೇಣುಬಿಗಿದು ಆತ್ಮಹತ್ಯೆ
ಬೆಂಗಳೂರು: ಗಂಡನ ಅಕ್ರಮ ಸಂಬಂಧಕ್ಕೆ ಬೇಸತ್ತು ವಿವಾಹಿತ ಮಹಿಳೆಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಅಂದ್ರಹಳ್ಳಿ ನಡೆದಿದೆ.
ಮಾನಸ(25)ಆತ್ಮಹತ್ಯೆಗೆ ಶರಣಾದ ಮಹಿಳೆ. ಗಂಡನ ಮನೆಯಲ್ಲಿ ವಾಸವಿದ್ದ ಮಾನಸ ಭಾನುವಾರ ಸಂಜೆ 4 ಗಂಟೆಯ ವೇಳೆಗೆ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಫ್ಯಾನಿನಲ್ಲಿ ನೇತಾಡುವ ಮುನ್ನ ಮೊಬೈಲ್‌ನಲ್ಲಿ ವಿಡಿಯೋ ಮಾಡಿದ್ದಾರೆ.





