ಮಂಗಳೂರು ಬೆಂಗಳೂರು ರೈಲ್ವೆ ಹಳಿ ಮೇಲೆ ಭೂಕುಸಿತ: ಆಗಸ್ಟ್ 3 ರವರೆಗೆ ರೈಲು ಸಂಚಾರ ಸ್ಥಗಿತ
ಮಂಗಳೂರು: ಭಾರೀ ಮಳೆಯಿಂದಾಗಿ ಸಕಲೇಶಪುರ ತಾಲ್ಲೂಕಿನ ಯಡಕುಮೇರಿ– ಕಡಗರವಳ್ಳಿ ನಿಲ್ದಾಣಗಳ ನಡುವೆ ಭೂಕುಸಿತವಾಗಿದೆ.
ದುರಸ್ಥಿ ಕಾರ್ಯಕ್ಕೆ ಹೆಚ್ಚಿನ ಸಮಯ ತೆಗೆದುಕೊಳ್ಳುತ್ತಿರುವ ಕಾರಣ ಅಗಸ್ಟ್ 3 ರವರೆಗೆ ಈ ರೈಲ್ವೆ ಮಾರ್ಗದಲ್ಲಿ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ.
ರೈಲು ಮಾರ್ಗದ ಕೆಳಭಾಗದ ಮಣ್ಣು ಸುಮಾರು 500 ಮೀಟರ್ ಆಳಕ್ಕೆ ಕುಸಿದಿದ್ದು, ಕಲ್ಲಿನ ಗೋಡೆ ನಿರ್ಮಿಸುವ ಕಾಮಗಾರಿಯನ್ನು ಮಾಡಲಾಗುತ್ತಿದೆ.





