December 15, 2025

ಮೂಡುಬಿದಿರೆ:  ಗ್ಯಾಸ್  ಗೀಸರ್ ನಿಂದ ಅನಿಲ ಸೋರಿಕೆ: ಉಸಿರುಗಟ್ಟಿ ಪದವಿ  ವಿದ್ಯಾರ್ಥಿ ಶಾರಿಕ್ ಮೃತ್ಯು

0
image_editor_output_image973515246-1722233533460

ಮೂಡುಬಿದಿರೆ: ಸ್ನಾನಕ್ಕೆಂದು ಬಾತ್ ರೂಮ್ ಒಳಗೆ ತೆರಳಿದ್ದ ಯುವಕನೋರ್ವ ಗ್ಯಾಸ್ ಗೀಸರ್ ವಿಷಾನಿಲ ಸೋರಿಕೆಯಾಗಿದ್ದರಿಂದ ಉಸಿರುಗಟ್ಟಿ ಮೃತಪಟ್ಟ ಘಟನೆ ರವಿವಾರ ರಾತ್ರಿ ಕೋಟೆಬಾಗಿಲಿನಲ್ಲಿ ಸಂಭವಿಸಿದೆ.

ಕೋಟೆಬಾಗಿಲಿನ ಫ್ಲ್ಯಾಟ್ ಒಂದರಲ್ಲಿ ವಾಸವಾಗಿರುವ ದಿ.ಅನ್ಸಾರ್ ಎಂಬವರ ಪುತ್ರ ಶಾರಿಕ್ (18) ಮೃ*ತಪಟ್ಟ ಯುವಕ.

ಶಾರಿಕ್ ರವಿವಾರ ರಾತ್ರಿ ಸ್ನಾನಕ್ಕೆಂದು ಬಾತ್ ರೂಮ್ ಗೆ ತೆರಳಿದ್ದರು. ತುಂಬಾ ಹೊತ್ತಾದರೂ ಶಾರಿಕ್ ಹೊರಬಾರದ ಕಾರಣ ಅವರ ಬಾತ್ ರೂಮ್ ಬಾಗಿಲು ಒಡೆದು ನೋಡಿದಾಗ ಈ ದುರ್ಘ*ಟನೆ ಬೆಳಕಿಗೆ ಬಂದಿದೆ.

ಸಂಪೂರ್ಣ ಮುಚ್ಚಿದ್ದ ಬಾತ್ ರೂಮ್ ನಲ್ಲಿ ಗ್ಯಾಸ್ ಗೀಸರ್ ಬಳಸಿದ್ದರಿಂದ ವಿಷಾನಿಲ ಬಿಡುಗಡೆ ಆಗಿದೆ. ಇದನ್ನು ಆಕಸ್ಮಿಕವಾಗಿ ಸೇವಿಸಿದ್ದರಿಂದ ಶಾರಿಕ್ ಉಸಿರುಗಟ್ಟಿ ಮೃ*ತಪಟ್ಟಿರುವುದಾಗಿ ತಿಳಿದು ಬಂದಿದೆ.

ಶಾರಿಕ್ ದ್ವಿತೀಯ ಪಿಯುಸಿ ಮುಗಿಸಿದ್ದು, ಮೂಡುಬಿದಿರೆಯ ಕಾಲೇಜೊಂದರಲ್ಲಿ ಪ್ರಥಮ ವರ್ಷದ ಪದವಿಗೆ ಪ್ರವೇಶಾತಿ ಪಡೆದಿದ್ದರು ಎಂದು ತಿಳಿದುಬಂದಿದೆ.

Leave a Reply

Your email address will not be published. Required fields are marked *

error: Content is protected !!