ಕವಿ, ಸಾಹಿತಿ ಭೂಹಳ್ಳಿ ಪುಟ್ಟಸ್ವಾಮಿ ಆತ್ಮಹತ್ಯೆ
ಮಂಗಳೂರು: ಕವಿ ಸಾಹಿತಿ ಪರಿಸರವಾದಿಯಾಗಿ ಗುರುತಿಸಿಕೊಂಡಿರುವ ಭೂಹಳ್ಳಿ ಪುಟ್ಟಸ್ವಾಮಿ(76 ವ) ಆತ್ಮಹತ್ಯೆಗೆ ಶರಣಾಗಿದ್ದಾರೆ. ಭಾನುವಾರ ರಾತ್ರಿ ಚನ್ನಪಟ್ಟಣದಲ್ಲಿರುವ ತನ್ನ ಬಾಡಿಗೆ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ಪುಟ್ಟಸ್ವಾಮಿ ಅವರು ವೃತ್ತಿಯಲ್ಲಿ ಇತಿಹಾಸ ಉಪನ್ಯಾಸಕರಾಗಿ, ಪ್ರವೃತ್ತಿಯಲ್ಲಿ ಸಾಹಿತಿಯಾಗಿರುವ ಇವರು ಸುಮಾರು 25 ಕ್ಕೂ ಹೆಚ್ಚು ಕವನ ಸಂಕಲಗಳನ್ನು ಪ್ರಕಟಿಸಿದ್ದಾರೆ. ಗೊರೂರು ಸಾಹಿತ್ಯ ಪ್ರಶಸ್ತಿ, ಚುಟುಕು ಸಾಹಿತ್ಯ ಪ್ರಶಸ್ತಿ, ಕೆಎಸ್‌ಆರ್‌ಟಿಸಿ ಕನ್ನಡ ಕ್ರಿಯಾ ಸಮಿತಿಯಿಂದ ಸಾಹಿತ್ಯ ಕೌಸ್ತುಭ ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿಗಳಿಗೆ ಪುಟ್ಟಸ್ವಾಮಿಯವರು ಭಾಜನರಾಗಿದ್ದರು.





