September 25, 2026

ಕಡಬ: ನಿಫಾ ವೈರಸ್ ಗೆ ತುತ್ತಾಗಿ ಕೋಮಾಗೆ ಜಾರಿದ ಪುತ್ತೂರಿನ‌ ನರ್ಸ್

0
image_editor_output_image1630299878-1722238074581.jpg

ಕಡಬ: ನಿಫಾ ವೈರಸ್ ಬಾಧಿಸಿದ್ದ ರೋಗಿಗೆ ಆರೈಕೆ ನೀಡಿದ್ದ ಕಡಬದ ನರ್ಸ್ ಓರ್ವರು ನಿಫಾ ವೈರಸ್ ಗೆ ತುತ್ತಾಗಿ ಕಳೆದ ಎಂಟು ತಿಂಗಳಿನಿಂದ ಕೋಮಾದಲ್ಲಿ ದಿನ ದೂಡುತ್ತಿರುವ ಹೃದಯ ವಿದ್ರಾವಕ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಕಡಬ ತಾಲೂಕಿನ ಐತ್ತೂರು ಗ್ರಾಮದ ಮರ್ಧಾಳ ಸಮೀಪದ ತುಂಬ್ಯ ನಿವಾಸಿ ತೋಮಸ್ ಟಿ.ಸಿ. ಎಂಬವರ ಪುತ್ರ ಟಿಟ್ಟೋ ತೋಮಸ್(24) ಇದೀಗ ಜೀವನ್ಮರಣ ಸ್ಥಿತಿಯಲ್ಲಿ ದಿನದೂಡುತ್ತಿರುವ ಯುವಕ.

 

ಬಿಎಸ್ಸಿ ನರ್ಸಿಂಗ್ ಪದವೀಧರನಾಗಿರುವ ಟಿಟ್ಟೋ ತೋಮಸ್ ಕೇರಳದ ಕ್ಯಾಲಿಕಟ್ ನಲ್ಲಿರುವ ಇಕ್ರಾ ಇಂಟರ್ನ್ಯಾಷನಲ್ ಹಾಸ್ಪಿಟಲ್ ಆ್ಯಂಡ್ ರಿಸರ್ಚ್ ಸೆಂಟರ್ ನಲ್ಲಿ 2023 ರಿಂದ ನರ್ಸ್ ಆಗಿ ಸೇವೆ ಸಲ್ಲಿಸುತ್ತಿದ್ದು, 2023 ರ ಸೆಪ್ಟೆಂಬರ್ ನಲ್ಲಿ ನಿಫಾ ವೈರಸ್ ಹೊಂದಿದ್ದ ರೋಗಿಯ ಆರೈಕೆ ಮಾಡಿದ್ದಾರೆ ಎನ್ನಲಾಗಿದೆ.

ಕ್ವಾರಂಟೈನ್ ನಲ್ಲಿದ್ದ ಟಿಟ್ಟೋ ಥಾಮಸ್ ಗೆ ಎರಡು ತಿಂಗಳು ಕಳೆದ ನಂತರ ವಿಪರೀತ ತಲೆನೋವು ಕಾಣಿಸಿಕೊಂಡಿದ್ದು, ಡಿಸೆಂಬರ್ ನಲ್ಲಿ ಸ್ಕ್ಯಾನಿಂಗ್ ನಡೆಸಿದಾಗ ಮಿದುಳಿನ ಸ್ಟ್ರೋಕ್‌ಗೆ ತುತ್ತಾಗಿರುವುದು ತಿಳಿದು ಬಂದಿದ್ದು, ಮರುದಿನವೇ ಕೋಮಾಗೆ ಜಾರಿದ್ದಾರೆ ಎನ್ನಲಾಗಿದೆ.

Leave a Reply

Your email address will not be published. Required fields are marked *

You may have missed

error: Content is protected !!