February 1, 2026

ಮಂಗಳೂರು: ಮುಲ್ಕಿ ಕೊಲ್ನಾಡ್ ಹೈವೇಯಲ್ಲಿ ಅಪಘಾತ: ಯುವಕ ಗಂಭೀರ

0
image_editor_output_image1518029153-1722238270313.jpg

ಮಂಗಳೂರು : ಮಂಗಳೂರು ಉಡುಪಿ ರಾಷ್ಟ್ರೀಯ ಹೆದ್ದಾರಿಯ ಮುಲ್ಕಿ ಕೊಲ್ನಾಡ್ ಹೈವೇಯಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಯುವಕ ನೋರ್ವ ಗಂಭೀರ ಗಾಯಗೊಂಡಿದ್ದಾನೆ.

ಇಂದು ಸೋಮವಾರ ಬೆಳಿಗ್ಗೆ ರಾಷ್ಟ್ರೀಯ ಹೆದ್ದಾರಿ 66 ಕೊಲ್ನಾಡ್ ಬಳಿ ಈ ಅಪಘಾತ ಸಂಭವಿಸಿದ್ದು ಓಮ್ನಿ ವಾಹನಕ್ಕೆ ರಾಂಗ್ ಸೈಡ್ ನಿಂದ ಬಂದ ಸ್ಕೂಟರ್ ಡಿಕ್ಕಿ ಹೊಡೆದ ಪರಿಣಾಮ ಯುವಕ ಗಂಭೀರ ಗಾಯಗೊಂಡಿದ್ದಾನೆ.

ಕೊಲ್ನಾಡ್ ನಿವಾಸಿ ಫೋರಮ್ ಮಾಲ್ ನಲ್ಲಿರುವ ಪೂರ್ವಿಕಾ ಮೊಬೈಲ್ ಶಾಪ್ ನಲ್ಲಿ ಕೆಲಸದಲ್ಲಿರುವ ಮನೀಶ್(22) ಗಾಯಗೊಂಡವರಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮನೀಶ್ ಅವರ ಕಾಲು, ಕೈ ತಲೆಯ ಭಾಗಕ್ಕೆ ಗಾಯಗಳಾಗಿದ್ದು ಸುರತ್ಕಲ್ ಮುಕ್ಕ ಶ್ರೀನಿವಾಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಂಚಾರಿ ಪೊಲೀಸರು ಪ್ರಕರಣ ದಾಖಲು ಮಾಡಿ ತನಿಖೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *

error: Content is protected !!