March 19, 2026

ಕಲಾಪದಲ್ಲಿ ಶಾಸಕರಿಗೆ ತುಳು ಭಾಷೆಯನ್ನು ಮಾತನಾಡಲು ಅವಕಾಶ ಮಾಡಿಕೊಟ್ಟ ಸ್ಪೀಕರ್: ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯಿಂದ ಸನ್ಮಾನ

0
image_editor_output_image-1469184493-1722316538156.jpg

ಮಂಗಳೂರು: ಕರ್ನಾಟಕ ವಿಧಾನಸಭೆಯಲ್ಲಿ ಕಲಾಪದ ವೇಳೆ ಶಾಸಕರಿಗೆ ತುಳು ಭಾಷೆಯನ್ನು ಮಾತನಾಡಲು ಅವಕಾಶ ಮಾಡಿಕೊಟ್ಟಿರುವ ಹಿನ್ನೆಲೆಯಲ್ಲಿ ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಅವರನ್ನು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ತಾರಾನಾಥ್ ಗಟ್ಟಿ ಕಾಪಿಕಾಡ್ ಅವರು ಮಂಗಳೂರಿನಲ್ಲಿ ಸನ್ಮಾನಿಸಿದರು.

ಖಾದರ್ ಅವರಿಗೆ ಸಾಲು ಹಾಗೂ ಪುಸ್ತಕ ಮತ್ತು ಸ್ಮರಣಿಕೆ ನೀಡಿ, ಅಭಿನಂದಿಸಿದರು. ಈ ವೇಳೆ ತುಳು ಸಾಹಿತ್ಯ ಅಕಾಡೆಮಿಯ ಸದಸ್ಯರಾದ ರೋಹಿತ್ ಉಳ್ಳಾಲ್, ಜಿಲ್ಲಾ ವಾರ್ತಾಧಿಕಾರಿ ಖಾದರ್ ಷಾ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!