ಮಂಗಳೂರು: ಬೀದಿ ಬದಿ ವ್ಯಾಪಾರಿಗಳ ಮೇಲೆ ಟೈಗರ್ ಕಾರ್ಯಾಚರಣೆ
ಮಂಗಳೂರು: ಬೀದಿ ಬದಿ ವ್ಯಾಪಾರಿಗಳ ಮೇಲೆ ಮಂಗಳೂರು ಮಹಾನಗರಪಾಲಿಕೆ ಟೈಗರ್ ಕಾರ್ಯಾಚರಣೆ ಆರಂಭಿಸಿದೆ. ಲೇಡಿಹಿಲ್‌ನ ನಾರಾಯಣ ಗುರು ವೃತ್ತದಿಂದ ಮಣ್ಣಗುಡ್ಡೆವರೆಗೆ ಹಾಗೂ ಕೆಪಿಟಿಯಿಂದ ಯೆಯ್ಯಾಡಿವರೆಗೆ ರಸ್ತೆ ಬದಿಯಲ್ಲಿ ಗೂಡಂಗಡಿಗಳನ್ನುಇಂದು ತೆರವುಗೊಳಿಸಲಾಯಿತು. ಈ ವೇಳೆ ಬೀದಿ ಬದಿ ವ್ಯಾಪಾರಿಗಳು ಹಾಗೂ ಅವರ ಸಂಘಟನೆಯ ಮುಖಂಡರು ಭಾರಿ ಸಂಖ್ಯೆಯಲ್ಲಿ ಸ್ಥಳದಲ್ಲಿ ಸೇರಿ ಪ್ರತಿರೋಧ ಒಡ್ಡಿದರು. ಕೆಲವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.


