ವಿಟ್ಲ: ಭಾರೀ ಮಳೆಗೆ ಮನೆಗಳಿಗೆ ನುಗ್ಗಿದ ನೀರು: ಅಧಿಕಾರಿಗಳಿಂದ ಮೂರು ಮನೆಗಳಿಗೆ ತಿಳುವಳಿಕೆ ಪತ್ರ
ವಿಟ್ಲ: ಮಂಗಳವಾರ ಸುರಿದ ಭಾರೀ ಮಳೆಗೆ ವಿಟ್ಲ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಮನೆಗಳಿಗೆ ಮಳೆ ನೀರು ನುಗ್ಗಿದ್ದು, ಅಧಿಕಾರಿಗಳು ಭೇಟಿ ನೀಡಿ ಮನೆ ಮಾಲೀಕರಿಗೆ ತಿಳುವಳಿಕೆ ಪತ್ರ ನೀಡಿದ್ದಾರೆ.
ಖಾಸಗಿ ವ್ಯಕ್ತಿಗಳು ಸರಿಯಾದ ಚರಂಡಿ ವ್ಯವಸ್ಥೆ ಮಾಡದ ಕಾರಣ ಮನೆಗಳಿಗೆ ನೆರೆ ನೀರು ನುಗ್ಗಿ ಭಾರೀ ಅವಾಂತರ ಸೃಷ್ಡಿಸಿತ್ತು.
ಸ್ಥಳಕ್ಕೆ ವಿಟ್ಲ ಪಟ್ಟಣ ಪಂಚಾಯತ್ ಮುಖ್ಯಧಿಕಾರಿ ಗೋಪಾಲ ನಾಯ್ಕ, 18ನೇ ವಾರ್ಡ್ ಸದಸ್ಯರಾದ ಹಸೈನಾರ್ ನೆಲ್ಲಿಗುಡ್ಡೆ ಭೇಟಿ ನೀಡಿದ್ದು 3 ಮನೆಗಳಿಗೆ ತಿಳುವಳಿಕೆ ಪತ್ರ ನೀಡಿದ್ದಾರೆ. ದಿಢೀರನೆ ಮಳೆ ನೀರು ನುಗ್ಗಿದ್ದು, ಸ್ಥಳೀಯರು ತಕ್ಷಣವೇ ಕಾರ್ಯಾಚರಣೆ ನಡೆಸಿ, ಯಾವುದೇ ಅನಾಹುತ ಸಂಭವಿಸಿದಂತೆ ಮುಂಜಾಗ್ರತಾ ಕ್ರಮ ಕೈಗೊಂಡಿದ್ದರು.





