ಉಡುಪಿ: ಟೋಲ್ ಗೇಟ್ ಬಳಿ ಕಾರು ಡಿಕ್ಕಿ: ವ್ಯಕ್ತಿ ಮೃತ್ಯು
ಉಡುಪಿ: ಬೈಂದೂರು ತಾಲೂಕಿನ ಶಿರೂರು ಐಆರ್ಬಿ ಟೋಲ್ ಬಳಿ ಕಾರು ಡಿಕ್ಕಿಯಾಗಿ ಸೆಕ್ಯೂರಿಟಿ ಗಾರ್ಡ್ ಮೃತಪಟ್ಟ ಘಟನೆ ನಡೆದಿದೆ.
ಇಂದು ಮುಂಜಾನೆ 2 ಗಂಟೆ ಸುಮಾರಿಗೆ ಕಾರೊಂದು ಟೋಲ್ ಗೇಟ್ ಗೆ ಡಿಕ್ಕಿ ಹೊಡೆದಿದೆ. ಅತೀ ವೇಗದಿಂದ ಬಂದು ಟೋಲ್ ಪ್ಲಾಝಾದ ಬ್ಯಾರಿಕೇಡ್ ಗೆ ಕಾರು ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ಪರಿಣಾಮ ಸೆಕ್ಯೂರಿಟಿ ಗಾರ್ಡ್ ಮೃತಪಟ್ಟಿದ್ದಾರೆ.
ಘಟನಾ ಸ್ಥಳದಲ್ಲಿದ್ದ ಟೋಲ್ ಸಿಬ್ಬಂದಿ ರಾಘವೇಂದ್ರ ಮೇಸ್ತ (44) ಸ್ಥಿತಿ ಗಂಭೀರವಾಗಿದೆ. ಟೋಲ್ ಗೇಟ್ ಗೆ ಕಾರು ಡಿಕ್ಕಿ ಹೊಡೆಯುವ ದೃಶ್ಯ ಸಿಸಿ ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.





