ಬಂಟ್ವಾಳ: ಉಕ್ಕಿ ಹರಿಯುತ್ತಿರುವ ನೇತ್ರಾವತಿ ನದಿ
ಬಂಟ್ವಾಳ: ಕಳೆದ ರಾತ್ರಿಯಿಂದ ವ್ಯಾಪಕವಾಗಿ ಮಳೆಯಾಗುತ್ತಿರುವುದರಿಂದ ಹಾಗೂ ಮಲೆನಾಡು ಪ್ರದೇಶದಲ್ಲಿಯೂ ವ್ಯಾಪಕ ಮಳೆಯ ಪರಿಣಾಮ ನೇತ್ರಾವತಿ ನದಿಯಲ್ಲಿ ನೀರಿನ ಮಟ್ಟ ಏರಿಕೆಯಾಗಿದ್ದು, ಬಂಟ್ವಾಳದಲ್ಲಿ ಬೆಳಗ್ಗೆ ನೀರಿನ ಮಟ್ಟ 8.3ಮೀ ಗೆ ತಲುಪಿದೆ.
ಈಗಾಗಲೇ ಕೆಲವೊಂದು ತಗ್ಗು ಪ್ರದೇಶಗಳು ಜಲಾವೃತಗೊಂಡಿದ್ದು, ನೀರಿನ ಮಟ್ಟ ಇನ್ನೂ ಹೆಚ್ಚಾದರೆ ಪ್ರವಾಹದ ಅಪಾಯದ ಸಾಧ್ಯತೆ ಹೆಚ್ಚಿದೆ.




