February 1, 2026

ವಯನಾಡ್: ಪ್ರವಾಹ ಪೀಡಿತ ಸ್ಥಳಕ್ಕೆ ತೆರಳುತ್ತಿದ್ದ ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್ ಕಾರು‌ ಅಪಘಾತ

0
378409-veena-george-1.webp

ವಯನಾಡ್: ಕೇರಳದ ವಯನಾಡಿನಲ್ಲಿ ನಡೆದಿರುವ ಭೂಕುಸಿತಕ್ಕೆ ಇಡೀ ದೇಶವೇ ಶೋಕಸಾಗರದಲ್ಲಿ ಮುಳುಗಿದೆ. ಈಗಾಗಲೇ ಸಾವಿನ ಸಂಖ್ಯೆ 163 ಕ್ಕೆ ಏರಿಕೆಯಾಗಿದೆ. ಇದೆ ವೇಳೆಯಲ್ಲಿ ಪ್ರವಾಹ ಪೀಡಿತ ಸ್ಥಳಕ್ಕೆ ತೆರಳುತ್ತಿದ್ದ ಕೇರಳದ ಆರೋಗ್ಯ ಸಚಿವೆ ವೀಣಾ ಜಾರ್ಜ್ ಅವರು ಅಪಘಾತಕ್ಕೀಡಾಗಿದ್ದಾರೆ.

ಕೇರಳದ ಆರೋಗ್ಯ ಸಚಿವೆ ವೀಣಾ ಜಾರ್ಜ್ ಅವರ ಕಾರು ಜುಲೈ 31 ರಂದು ಬೆಳಗ್ಗೆ ರಸ್ತೆ ಅಪಘಾತಕ್ಕೆ ಒಳಗಾಗಿದೆ. ಅಪಘಾತದಲ್ಲಿ ಸಣ್ಣಪುಟ್ಟ ಗಾಯಗೊಂಡಿರುವ ಆರೋಗ್ಯ ಸಚಿವೆ ಮಲಪ್ಪುರಂನ ಮಂಜೇರಿಯಲ್ಲಿರುವ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಾಗಿ, ಚಿಕಿತ್ಸೆ ಪಡೆದಿದ್ದಾರೆ.

ಭೂಕುಸಿತ ಪೀಡಿತ ವಯನಾಡ್‌ಗೆ ತೆರಳುತ್ತಿದ್ದ ಸಚಿವೆ ವೀಣಾ ಜಾರ್ಜ್ ಮಂಜೇರಿಯ ಚೆಟ್ಟಿಯಂಗಡಿ ಎಂಬಲ್ಲಿ ಬೆಳಗ್ಗೆ 7:30ರ ಸುಮಾರಿಗೆ ಅವರ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಎದುರಿಗೆ ಬರುತ್ತಿದ್ದ ಸ್ಕೂಟರ್‌ಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ವಾಹನವನ್ನು ತಿರುಗಿಸಿದಾಗ ಈ ಘಟನೆ ನಡೆದಿದೆ ಎನ್ನಲಾಗಿದೆ. ಸ್ಕೂಟರ್‌ನಲ್ಲಿದ್ದವರನ್ನೂ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

Leave a Reply

Your email address will not be published. Required fields are marked *

error: Content is protected !!