ಉಡುಪಿ: ಯಕ್ಷಗಾನ ಸ್ತ್ರೀವೇಷಧಾರಿ ಗುರುಪ್ರಸಾದ್ ಆತ್ಮಹತ್ಯೆ
ಉಡುಪಿ: ಮಂದಾರ್ತಿ, ಮಡಾಮಕ್ಕಿ, ಅಮೃತೇಶ್ವರಿ, ಸಾಲಿಗ್ರಾಮ ಹಾಗೂ ಮಾರಣಕಟ್ಟೆ ಮೇಳಗಳಲ್ಲಿ ಸುಮಾರು 12 ವರ್ಷ ಸ್ತ್ರೀವೇಷಧಾರಿಯಾಗಿ ಕಲಾಸೇವೆಗೈದ ಗುರುಪ್ರಸಾದ್ ನೀರ್ಜೆಡ್ಡು (26) ವಿಷ ಸೇವಿಸಿ ಆತ್ಮಹತ್ಯೆ ಮಾಡಿದ್ದಾರೆ.
ಗುರುಪ್ರಸಾದ್ ನೀರ್ಜೆಡ್ಡು ಅವರು ವಿಷ ಸೇವನೆ ಮಾಡಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಆದರೆ ಆತ್ಮಹತ್ಯೆಗೆ ಕಾರಣ ಮಾತ್ರ ನಿಗೂಢವಾಗಿಯೇ ಇದೆ.
ಮಂದಾರ್ತಿ ಯಕ್ಷಗಾನ ತರಬೇತಿ ಕೇಂದ್ರದಲ್ಲಿ ಹಾರಾಡಿ ರಮೇಶ ಗಾಣಿಗರಿಂದ ಗುರುಪ್ರಸಾದ್ ಯಕ್ಷಗಾನ ನೃತ್ಯಾಭ್ಯಾಸ ಮಾಡಿದರು. ಭವಿಷ್ಯದಲ್ಲಿ ಭರವಸೆಯ ಕಲಾವಿದರಾಗಿದ್ದ ಇವರು ಮುಂದಿನ ತಿರುಗಾಟಕ್ಕೆ ಕುಂದಾಪುರ ತಾಲೂಕಿನ ಹಾಲಾಡಿ ಮೇಳಕ್ಕೆ ನೇಮಕಗೊಂಡಿದ್ದರು.





