February 2, 2026

ಬೆಳ್ಮಣ್: ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಕಾರು

0
image_editor_output_image1384479430-1722490055342.jpg

ಬೆಳ್ಮಣ್: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ನಂದಳಿಕೆ ಬಳಿ ಬುಧವಾರ ಮಧ್ಯಾಹ್ನ ಸಂಭವಿಸಿದೆ.

ಪಡುಬಿದ್ರಿ- ಕಾರ್ಕಳ ರಾಜ್ಯ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ಬಲೆನೊ ಕಾರು ನಂದಳಿಕೆ ಲಕ್ಷ್ಮೀ ಜನಾರ್ದನ ಶಾಲಾ ತಿರುವು ಬಳಿ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಡಿಕ್ಕಿಯಾಗಿದೆ.

ಪರಿಣಾಮ ವಿದ್ಯುತ್‌ ಕಂಬಗಳು ತುಂಡಾಗಿ ಬಿದ್ದಿದ್ದು, ಕಾರು ಸಂಪೂರ್ಣ ಜಖಂಗೊಂಡಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Leave a Reply

Your email address will not be published. Required fields are marked *

error: Content is protected !!