ಶಿರಾಡಿಘಾಟ್‌ನಲ್ಲಿ ಮತ್ತೆ ಗುಡ್ಡ ಕುಸಿತ: ಮಣ್ಣಿನಡಿ ಸಿಲುಕಿದ ವಾಹನಗಳು
ಹಾಸನ: ಭಾರೀ ಮಳೆಗೆ ದೊಡ್ಡ ಪ್ರಮಾಣದಲ್ಲಿ ಗುಡ್ಡ ಕುಸಿದ ಪರಿಣಾಮ ಶಿರಾಡಿ ಘಾಟ್ ಮತ್ತೆ ಬಂದ್ ಆಗಿದೆ.
ರಾಷ್ಟ್ರೀಯ ಹೆದ್ದಾರಿ 75 ಬೆಂಗಳೂರು-ಮಂಗಳೂರು ಶಿರಾಡಿಘಾಟ್ ರಸ್ತೆಯಲ್ಲಿ ಗುಡ್ಡ ಕುಸಿದಿದೆ. ಸಕಲೇಶಪುರ ತಾಲೂಕಿನ ದೊಡ್ಡತಪ್ಲುನಲ್ಲಿ ಗುಡ್ಡ ಕುಸಿದಿದ್ದು ಮಣ್ಣಿನಡಿ ಕೆಲವು ವಾಹನಗಳು ಸಿಲುಕಿವೆ.
ಗುಡ್ಡ ಕುಸಿತದ ರಭಸಕ್ಕೆ ಕಂಟೇನರ್ ಪಲ್ಟಿಯಾಗಿದ್ದು, ಮತ್ತೊಂದು ಬೃಹತ್ ಕಂಟೇನರ್ ಮಣ್ಣಿನಡಿ ಸಿಲುಕಿದೆ. ಪಲ್ಟಿಯಾಗಿರುವ ಕಂಟೇನರ್‌ನಲ್ಲಿ ಚಾಲಕ ಸಿಲುಕಿದ್ದಾನೆ. ಸಂಜೆ ಮಳೆ ಹೆಚ್ಚಾಗಿರುವುದರಿಂದ ಗುಡ್ಡ ಕುಸಿದಿದೆ. ಶಿರಾಡಿಘಾಟ್ ರಸ್ತೆಯಲ್ಲಿ ಮತ್ತೆ ವಾಹನ ಸಂಚಾರ ಬಂದ್ ಆಗಿದೆ.




