March 24, 2026

ಮಂಗಳೂರು: ಯುವತಿ ನಾಪತ್ತೆ

0
image_editor_output_image-2089003666-1722494132919.jpg

ಮಂಗಳೂರು: ನಗರದ ಬಿಜೈಯ ಯುವತಿಯೋರ್ವಳು ನಾಪತ್ತೆಯಾಗಿರುವ ಬಗ್ಗೆ ಪೊಲೀಸರಿಗೆ ದೂರು ನೀಡಲಾಗಿದೆ.

ಕೆಲಿಸ್ತಾ ಫೆರಾವೊ (18) ನಾಪತ್ತೆಯಾದವರು. ಎಸೆಸೆಲ್ಸಿ ಬಳಿಕ ಆಟೊಮೊಬೈಲ್ ಕೋರ್ಸ್‌ಗೆ ಸೇರ್ಪಡೆಗೊಂಡಿದ್ದ ಈಕೆ ಮಂಗಳವಾರ ಮಧ್ಯಾಹ್ನ 12.15ರ ಸುಮಾರಿಗೆ ಮನೆಯಿಂದ ಹೊರಗೆ ಹೋಗಿದ್ದಳು.

ಇದು ಮನೆಯವರ ಗಮನಕ್ಕೆ ಬಂದ ಕೂಡಲೇ ಅವರು ಹುಡುಕಾಟ ಆರಂಭಿಸಿದ್ದರು. ಸಿಸಿ ಕೆಮರಾವೊಂದನ್ನು ಪರಿಶೀಲಿಸಿದಾಗ ಈಕೆ ಆಟೋರಿಕ್ಷಾದಲ್ಲಿ ಹೋಗುತ್ತಿರುವ ದೃಶ್ಯ ದಾಖಲಾಗಿತ್ತು.

ಈಕೆಗೆ ಪಬ್‌ಜೀ ಗೇಮ್‌ನ ಅಭ್ಯಾಸವಿತ್ತು. ಈಕೆ 9ನೇ ತರಗತಿಯಲ್ಲಿದ್ದಾಗಲೂ ಪಬ್‌ಜಿ ಆಡುತ್ತಿದ್ದಳು. ಶಾಲೆಯಿಂದ ಮನೆಗೆ ಬಂದ ಮೇಲೆ ವೈಫೈ ಮೂಲಕ ಮನೆಯ ಮೊಬೈಲ್‌ನಲ್ಲಿ ಪಬ್‌ಜಿ ಆಡುತ್ತಿದ್ದಳು. ಈ ಬಗ್ಗೆ ಹೆತ್ತವರು ಹಲವಾರು ಬಾರಿ ಎಚ್ಚರಿಕೆ ನೀಡಿದ್ದರು ಎನ್ನಲಾಗಿದೆ.

Leave a Reply

Your email address will not be published. Required fields are marked *

error: Content is protected !!