March 24, 2026

ಸೋರುತ್ತಿದೆ ನೂತನವಾಗಿ ನಿರ್ಮಾಣವಾಗಿರುವ ಸಂಸತ್ ಭವನ

0
image_editor_output_image201905741-1722501196632.jpg

ದೆಹಲಿಯಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಹೊಸದಾಗಿ ನಿರ್ಮಾಣವಾಗಿರುವ ಸಂಸತ್ ಭವನ ಕೂಡ ಸೋರುತ್ತಿದೆ. ಸಂಸತ್ ಭವನದ ಸುತ್ತ ಮುತ್ತಲು ಸಂಪೂರ್ಣವಾಗಿ ಜಲಾವೃತಗೊಂಡಿದೆ. ವಿರೋಧ ಪಕ್ಷಗಳು ಹಳೆಯ ಸಂಸತ್ತಿಗೆ ಹೋಲಿಕೆ ಮಾಡಲಾರಂಭಿಸಿವೆ.

ಎಕ್ಸ್ನಲ್ಲಿ ವಿಡಿಯೋ ಪೋಸ್ಟ್ ಮಾಡಿದ್ದ ಎಸ್ಪಿ ಮುಖ್ಯಸ್ಥ ಅಖಿಲೇಶ್ ಯಾದವ್ ಈ ಹೊಸ ಸಂಸತ್ತಿಗಿಂತ ಹಳೆಯ ಸಂಸತ್ತು ಉತ್ತಮವಾಗಿದೆ. ಕೋಟ್ಯಂತರ ರೂಪಾಯಿ ವೆಚ್ಚದಲ್ಲಿ ಕಟ್ಟಿದ ಸಂಸತ್ತಿನಲ್ಲಿ ನೀರು ಸುರಿಯುತ್ತಿರುವವರೆಗೂ ಹಳೆ ಸಂಸತ್ತಿನಲ್ಲಿ ಮತ್ತೆ ಏಕೆ ಕೆಲಸ ಮಾಡಬಾರದು ಎಂದು ಬರೆದಿದ್ದಾರೆ.

ಇದೇ ವೇಳೆ ಕಾಂಗ್ರೆಸ್ ಸಂಸದ ಮಾಣಿಕ್ಕಂ ಠಾಗೋರ್ ಕೂಡ ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದು, ಹೊರಗೆ ಪೇಪರ್ ಲೀಕ್ ಒಳಗೆ ನೀರು ಲೀಕ್ ಎಂದು ಬರೆದಿದ್ದಾರೆ.

Leave a Reply

Your email address will not be published. Required fields are marked *

error: Content is protected !!