ಮಳೆಗಾಲದಲ್ಲಿ ಅಪಾಯಕಾರಿ ಪ್ರದೇಶಗಳಲ್ಲಿ Reels ಮಾಡಿದರೆ FIR ದಾಖಲು: ಜಿಲ್ಲಾಧಿಕಾರಿ ಮುಲೈಮುಗಿಲನ್ ಎಚ್ಚರಿಕೆ
ಪುತ್ತೂರು: ಮಳೆಗಾಲದ ಸಂದರ್ಭ ಅಪಾಯಕಾರಿ ಪ್ರದೇಶಗಳಲ್ಲಿ ರೀಲ್ಸ್ ಮಾಡಿದರೆ ಅವರ ಮೇಲೆ ಎಫ್‌ಐಆರ್ ದಾಖಲಿಸಲಾಗುವುದು ಎಂದು ದಕ್ಷಿಣಕನ್ನಡ ಜಿಲ್ಲಾಧಿಕಾರಿ ಮುಲೈಮುಗಿಲನ್ ಎಚ್ಚರಿಕೆ ನೀಡಿದ್ದಾರೆ.
ದಕ್ಷಿಣಕನ್ನಡ ಜಿಲ್ಲೆಯಲ್ಲಿರುವ ಪ್ರವಾಸಿ ತಾಣ, ಬೀಚ್ ಗಳಲ್ಲಿ ಅಪಾಯಕಾರಿ ಬೋರ್ಡ್ ಆಳವಡಿಸಲಾಗಿದೆ. ಬೋರ್ಡ್ ಜೊತೆ ಕೆಲವು ಕಾನೂನುಗಳು ಅನ್ವಯವಾಗುತ್ತದೆ. ಇಂತಹ ಬೋರ್ಡ್ ಇರುವ ಪ್ರದೇಶಗಳಲ್ಲಿ ಕಾನೂನು ಮೀರಿ ರೀಲ್ಸ್ ಮಾಡಿದರೆ ಅವರ ಮೇಲೆ ಎಫ್‌ಐಆರ್ ದಾಖಲಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.





