March 24, 2026

ಪ್ರವಾಹ ಪೀಡಿತ ವಯನಾಡಿಗೆ ಭೇಟಿ ನೀಡಿದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ

0
image_editor_output_image1023202015-1722512111566

ವಯನಾಡು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಭೂಕುಸಿತ ಸಂಭವಿಸಿದ ವಯನಾಡಿನ ಗ್ರಾಮಗಳಿಗೆ ಗುರುವಾರ ಭೇಟಿ ನೀಡಿದ್ದಾರೆ.

ಗುರುವಾರ ಬೆಳಿಗ್ಗೆ ಕಣ್ಣೂರಿಗೆ ಬಂದಿಳಿದ ರಾಹುಲ್ ಹಾಗೂ ಪ್ರಿಯಾಂಕಾ ವಿವಿಧ ಪುನರ್ವಸತಿ ಕೇಂದ್ರಗಳಿಗೆ ಭೇಟಿ ನೀಡಿದ್ದಾರೆ ಎಂದು ಪಿಟಿಐ ವರದಿ ತಿಳಿಸಿದೆ.

ಈ ಕುರಿತು ಕಾಂಗ್ರೆಸ್ ಎಕ್ಸ್ನಲ್ಲಿ ಪೋಸ್ಟ್ ಹಂಚಿಕೊಂಡಿದ್ದು, ‘ದುರಂತ ಸಂಭವಿಸಿದ ವಯನಾಡಿನ ಮೇಪ್ಪಾಡಿಗೆ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ತಲುಪಿದ್ದು, ಅಲ್ಲಿಯ ಸಂತ್ರಸ್ತರನ್ನು ಭೇಟಿಯಾಗಿದ್ದಾರೆ’ ಎಂದು ಬರೆದುಕೊಂಡಿದೆ.

Leave a Reply

Your email address will not be published. Required fields are marked *

error: Content is protected !!