February 1, 2026

ಮರಕ್ಕೆ ಡಿಕ್ಕಿಹೊಡೆದ ಕಾರು: ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವು

0
image_editor_output_image656179499-1722665187748.jpg

ಕೋಲಾರ: ಆಡಿ ಕಾರೊಂದು ಮರಕ್ಕೆ ಡಿಕ್ಕಿಯಾಗಿ ಭೀಕರ ಅಪಘಾತ ಉಂಟಾದ ಪರಿಣಾಮ ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿದ್ದು, ಓರ್ವ ಬಚಾವಾದ ಘಟನೆ ಕೋಲಾರ ಹೊರವಲಯದಲ್ಲಿ ನಡೆದಿದೆ.

ಬಂಗಾರಪೇಟೆ ಮುಖ್ಯರಸ್ತೆ ಸಹಕಾರ ನಗರದಲ್ಲಿ ಘಟನೆ ನಡೆದಿದೆ. ಮೃತರನ್ನು ಹಾಸನ ಮೂಲದ ಹರ್ಷವರ್ಧನ್, ಬಳ್ಳಾರಿ ಮೂಲದ ಬಸವರಾಜ್ ಹಾಗೂ ಬಂಗಾರಪೇಟೆಯ ನಿಶ್ಚಲ್ ಎಂದು ಗುರುತಿಸಲಾಗಿದೆ. ಮೃತರು ಪ್ರಸಿದ್ಧ ಯೂನಿವರ್ಸಿಟಿವೊಂದರ ವಿದ್ಯಾರ್ಥಿಗಳು. ಬಂಗಾರಪೇಟೆಯ ಸಾಯಿ ಗಗನ್ ಘಟನೆಯಲ್ಲಿ ಪಾರಾಗಿದ್ದಾನೆ. ವಿದ್ಯಾರ್ಥಿಗಳು ಸಾಯಿ ಗಗನ್ ಮನೆಗೆ ಬಂದಿದ್ದರು. ಅಲ್ಲಿಂದ ವಾಪಸ್ ಕೋಲಾರಕ್ಕೆ ತೆರಳುವ ವೇಳೆ ದುರ್ಘಟನೆ ಸಂಭವಿಸಿದೆ.

Leave a Reply

Your email address will not be published. Required fields are marked *

error: Content is protected !!