ಬೆಳ್ತಂಗಡಿ: ದ್ವಿಚಕ್ರ ವಾಹನ ಹಾಗೂ ಕಾರು ನಡುವೆ ಅಪಘಾತ:
ಬೈಕ್ ಸವಾರ ಸ್ಥಳದಲ್ಲೇ ಮೃತ್ಯು
ಬೆಳ್ತಂಗಡಿ: ಇಲ್ಲಿನ ಸಂತೆಕಟ್ಟೆ ಆನ್ ಸಿಲ್ಕ್ ಬಳಿ ವ್ಯಾಗನಾರ್ ಮತ್ತು ಬೈಕ್ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದ್ದು,
ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ
ಬೈಕ್ ಸವಾರ ಮಚ್ಚಿನ ಗ್ರಾಮದ ನಿವಾಸಿ ಅಶ್ವಿನ್(22 ವ) ಎಂಬವರೇ ಅಪಘಾತದಲ್ಲಿ ಮೃತಪಟ್ಟವರಾಗಿದ್ದಾರೆ. ಇಂದು ಗೀತಾ ಜಯಂತಿ ಅಂಗವಾಗಿ ಮೇಲಂತಬೆಟ್ಟುವಿನಲ್ಲಿ ನಡೆದ ಶೌರ್ಯ ಸಂಚಲನ ಕಾರ್ಯಕ್ರಮದಲ್ಲಿ ಭಾಗವಹಿಸಿ, ಬೆಳ್ತಂಗಡಿಗೆ ಹಿಂದಿರುಗುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ.
ದ್ವಿಚಕ್ರ ವಾಹನದಲ್ಲಿ ಇನ್ನೋರ್ವ ಸವಾರ ಪ್ರದೀಪ್ ಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ. ಯತಿನ್ ಗುರುವಾಯನಕೆರೆಯಲ್ಲಿ ವೆಲ್ಡಿಂಗ್ ಶಾಪ್ ನಲ್ಲಿ ಕೆಲಸ ನಿರ್ವಹಿಸುತ್ತಿದ್ದರು ಎಂದು ತಿಳಿದುಬಂದಿದೆ.





