ಪಿಎಸ್ಐನಿಂದ ಪತ್ನಿ ಮೇಲೆ ಮಾರಣಾಂತಿಕ ಹಲ್ಲೆ:
ಬೆಳಗಾವಿ: ಪಿಎಸ್ಐನಿಂದ ಪತ್ನಿ ಮೇಲೆ ಮಾರಣಾಂತಿಕ ಹಲ್ಲೆ ಮಾಡಿರುವಂತಹ ಘಟನೆ ಜಿಲ್ಲೆಯ ಮಾಳಮಾರುತಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಪಿಎಸ್ಐ ಪತಿ ಉದ್ದಪ್ಪ ಕಟ್ಟಿಕಾರ ವಿರುದ್ಧ ಪತ್ನಿ ಪ್ರತಿಮಾ ಹಲ್ಲೆ ಆರೋಪ ಮಾಡಿದ್ದಾರೆ. ಉದ್ದಪ್ಪ ಯುವತಿ ಜೊತೆಗೆ ಅಕ್ರಮ ಸಂಬಂಧ ಹೊಂದಿದ್ದ ಆರೋಪ ಮಾಡಲಾಗಿದ್ದು, ಅದನ್ನು ಪ್ರಶ್ನಿಸಿದ್ದಕ್ಕೆ ಮಕ್ಕಳ ಎದುರೇ ಪ್ರತಿಮಾ ಮೇಲೆ ಹಲ್ಲೆ ಮಾಡಿದ್ದು, ಕಣ್ಣು, ಕುತ್ತಿಗೆ ಭಾಗಕ್ಕೆ ಹಲ್ಲೆ ಉದ್ದಪ್ಪ ಹಲ್ಲೆ ಮಾಡಿದ್ದು, ಸದ್ಯ ಹಲ್ಲೆಗೊಳಗಾದ ಪ್ರತಿಮಾ ಬಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.





