ಸಿಸಿಬಿ ಪೊಲೀಸ್ ಇನ್ ಸ್ಪೆಕ್ಟರ್ ಆತ್ಮಹತ್ಯೆ
ರಾಮನಗರ: ಸಿಸಿಬಿ ಪೊಲೀಸ್ ಇನ್ಸ್ ಪೆಕ್ಟರ್ ಓರ್ವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ರಾಮನಗರ ಜಿಲ್ಲಾ ಪೊಲೀಸ್ ವ್ಯಾಪ್ತಿಯ ಕುಂಬಳಗೂಡು ಬಳಿ ಸೋಮವಾರ (ಆ.05) ನಡೆದಿದೆ.
ಬೆಂಗಳೂರು ಸಿಸಿಬಿ ಅಪರಾಧ ವಿಭಾಗದಲ್ಲಿ ಪೊಲೀಸ್ ಇನ್ಸ್ ಪೆಕ್ಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ತಿಮ್ಮೇಗೌಡರವರು ಕುಂಬಳಗೂಡು ಬಳಿಯ ಖಾಸಗಿ ಲೇಔಟ್ ನಲ್ಲಿರುವ ಮರವೊಂದಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮೃತರು ಈ ಹಿಂದೆ ಬಿಡದಿ ಪೊಲೀಸ್ ಠಾಣೆಯಲ್ಲಿ ಕಾರ್ಯನಿರ್ವಹಿಸಿದ್ದರು. ಇನ್ಸ್‌ಪೆಕ್ಟರ್ ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ.





