September 20, 2024

ಸಂಪಾಜೆ: ಧರ್ಮಸ್ಥಳಕ್ಕೆ ಹೊರಟಿದ್ದ ಬೈಕ್ ಮೋರಿಗೆ ಢಿಕ್ಕಿ, ಇಬ್ಬರು ಯುವಕರು ಸಾವು

0

ಸಂಪಾಜೆ: ಬೈಕ್ ಸವಾರನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮೋರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರಿಬ್ಬರು ಸಾವನಪ್ಪಿದ ಘಟನೆ ಸಂಪಾಜೆ ಅರಣ್ಯ ಇಲಾಖಾ ಕಚೇರಿ ಬಳಿ ರವಿವಾರ ತಡರಾತ್ರಿ ನಡೆದಿರುವುದು ವರದಿಯಾಗಿದೆ.

ಮೃತರನ್ನು ಮೈಸೂರು ಮೂಲದ ಯುವಕರಾದ ಪವನ್ ಹಾಗೂ ಮನೋಜ್ ಎಂದು ಗುರುತಿಸಲಾಗಿದೆ. ಮೈಸೂರಿನಿಂದ ಧರ್ಮಸ್ಥಳಕ್ಕೆ ಬುಲೆಟ್ ಬೈಕಿನಲ್ಲಿ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ.

ಕಳೆದ ರಾತ್ರಿ ವೇಳೆ ಕೊಯ್ನಾಡಿನ ಫಾರೆಸ್ಟ್ ಐಬಿ ಬಳಿ ಮುಖ್ಯರಸ್ತೆಯಲ್ಲಿ ತಲುಪಿದಾಗ ಚಾಲಕನ ನಿಯಂತ್ರಣ ತಪ್ಪಿದ ಬೈಕ್ ರಸ್ತೆ ಬದಿಯಲ್ಲಿದ್ದ ಮೋರಿಗೆ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ. ಇದರಿಂದ ಸವಾರರಿಬ್ಬರು ಪಕ್ಕದ ಚರಂಡಿಗೆ ಎಸೆಯಲ್ಪಟ್ಟು ಸ್ಥಳದಲೇ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.

Leave a Reply

Your email address will not be published. Required fields are marked *

error: Content is protected !!