March 24, 2026

ಬಾಂಗ್ಲಾದೇಶ: ಪ್ರಧಾನಿ ಸ್ಥಾನಕ್ಕೆ ಶೇಖ್ ಹಸೀನಾ ಅವರು ರಾಜೀನಾಮೆ

0
Sheikh-Hasina.jpg

ಬಾಂಗ್ಲಾದೇಶ: ಪ್ರಧಾನಿ ಸ್ಥಾನಕ್ಕೆ ಶೇಖ್ ಹಸೀನಾ ಅವರು ರಾಜೀನಾಮೆ ನೀಡಿದ್ದು, ಈ ಬೆಳವಣಿಗೆಯ ನಂತರ ಬಾಂಗ್ಲಾದೇಶ ಸೇನಾ ವಶಕ್ಕೆ ಒಳಪಟ್ಟಿದೆ.

ಬಾಂಗ್ಲಾ ಪ್ರಧಾನಿ ಶೇಖ್ ಹಸೀನಾ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ದೇಶದಿಂದ ಪಲಾಯನವಾದ ಬಳಿಕ ಬಾಂಗ್ಲಾದೇಶವನ್ನು ನಾವು ವಶಕ್ಕೆ ಪಡೆದಿದ್ದೇವೆ ಎಂದು ಸೇನಾ ಮುಖ್ಯಸ್ಥ ಹೇಳಿದ್ದಾರೆ

ಬಾಂಗ್ಲಾದೇಶದ ಪ್ರಧಾನಿ ರಾಜೀನಾಮೆಗೆ ಒತ್ತಾಯಿಸಿ ನಡೆಸಿದ ಪ್ರತಿಭಟನೆ, ಹಿಂಸಾಚಾರದಲ್ಲಿ ಇದುವರೆಗೆ 300 ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ. ಈ ಎಲ್ಲಾ ಬೆಳವಣಿಗೆಯ ನಂತರ ಶೇಖ್ ಹಸೀನಾ ತಮ್ಮ ಹುದ್ದೆಗೆ ರಾಜೀನಾಮೆ ನೀಡಿ ಸುರಕ್ಷಿತ ಸ್ಥಳಕ್ಕೆ ಫಲಾಯನ ಮಾಡಿದ್ದಾರೆ.

ಶೇಖ್ ಹಸೀನಾ ಅವರು ಭಾರತದ ಅಗರ್ತಲಾದಲ್ಲಿರುವ ತ್ರಿಪುರಾ ರಾಜಧಾನಿಗೆ ತೆರಳುತ್ತಿದ್ದಾರೆ ಎಂದು ಬಿಬಿಸಿ ಬಾಂಗ್ಲಾ ವರದಿ ಮಾಡಿದೆ. ಆದಾಗ್ಯೂ, ಶೇಖ್ ಹಸೀನಾ ಅವರು ಢಾಕಾ ತೊರೆಯುವ ಬಗ್ಗೆ ಅಧಿಕೃತ ದೃಢೀಕರಣವಿಲ್ಲ.

ವಿಮಾನ ದೆಹಲಿಯತ್ತ ಹೊರಟಿದೆ ಎಂದು ಮೂಲಗಳು ತಿಳಿಸಿವೆ. ಈ ವಿಮಾನದಲ್ಲಿ ಶೇಖ್ ಹಸೀನಾ ಮತ್ತು ಅವರ ಪರಿವಾರದ ಕೆಲವು ಸದಸ್ಯರು ಇದ್ದಾರೆ ಎಂದು ನಂಬಲಾಗಿದೆ ಎಂದು ಮೂಲಗಳು ಹೇಳುತ್ತವೆ. ದೆಹಲಿಯ ರನ್‌ವೇಯಲ್ಲಿ ವಿಮಾನವು ಸುಮಾರು 1700-1715 ಗಂಟೆಗಳವರೆಗೆ ತಲುಪುವ ನಿರೀಕ್ಷೆಯಿದೆ.

Leave a Reply

Your email address will not be published. Required fields are marked *

error: Content is protected !!