ಜೆಡಿಎಸ್- ಬಿಜೆಪಿ ಪಾದಯಾತ್ರೆಯಲ್ಲಿ ಮಹಿಳೆ ಮೃತ್ಯು: ಮತ್ತೋರ್ವ ಅಸ್ವಸ್ಥ
ರಾಮನಗರ: ಮುಡಾ ಹಗರಣ ವಿರೋಧಿಸಿ ಜೆಡಿಎಸ್- ಬಿಜೆಪಿ ನಡೆಸುತ್ತಿರುವ ಜಂಟಿ ಪಾದಯಾತ್ರೆಯಲ್ಲಿ ಜೆಡಿಎಸ್ ಕಾರ್ಯಕರ್ತೆ ಬೆಂಗಳೂರು ಮೂಲದ ಗೌರಮ್ಮ ಎಂಬಾಕೆ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.
ಇಂದು ಮೂರನೇ ದಿನ ಪಾದಯಾತ್ರೆ ರಾಮನಗರ ಜಿಲ್ಲೆ ಪ್ರವೇಶಿಸಿದ್ದು, ಈ ವೇಳೆ ಬಿಜೆಪಿ ಕಾರ್ಯಕರ್ತೆ ಗೌರಮ್ಮ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಚನ್ನಪಟ್ಟಣದಲ್ಲಿ ಪಾದಯಾತ್ರೆಯಲ್ಲಿ ನಡೆಯುತ್ತಿರುವ ವೇಳೆ ಬೆಂಗಳೂರಿನ ಬಸವನಗುಡಿಯ ಬಿಜೆಪಿ ಕಾರ್ಯಕರ್ತೆ ಗೌರಮ್ಮ ಕುಸಿದುಬಿದ್ದು ಸಾವನ್ನಪ್ಪಿದ್ದಾರೆ.
ಕೂಡಲೇ ಅವರನ್ನ ಚನ್ನಪಟ್ಟಣದ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆದರೆ, ಅಷ್ಟರಾಗಲೇ ಗೌರಮ್ಮ ಕೊನೆಯುಸಿರೆಳೆದಿದ್ದಾರೆ. ಇನ್ನು ಚನ್ನಪಟ್ಟಣದಲ್ಲಿ ಪಾದಯಾತ್ರೆ ವೇಳೆ ಬಿಜೆಪಿ ಮುಖಂಡರೊಬ್ಬರು ಅಸ್ವಸ್ಥಗೊಂಡಿದ್ದಾರೆ. ಬೆಂಗಳೂರಿನ ಜಯನಗರದ ಮಂಡಳ ಉಪಾಧ್ಯಕ್ಷ ಶಂಕರ್ ಅವರು ಪಾದಯಾತ್ರೆ ಮಾಡುವ ಸಂದರ್ಭದಲ್ಲಿ ಅಸ್ವಸ್ಥಗೊಂಡಿದ್ದು, ಕೂಡಲೇ ಅವರನ್ನು ಆ್ಯಂಬುಲೆನ್ಸ್ ಮೂಲಕ ರಾಮನಗರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ
ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿದ್ದ ಮೃತರ ಅಂತಿಮ ದರ್ಶನವನ್ನು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ವಿಜಯೇಂದ್ರ ಪಡೆದುಕೊಂಡಿದ್ದಾರೆ.




