December 19, 2025

ಶಾಲಾ ಬಸ್ ಹರಿದು 5 ವರ್ಷದ ಬಾಲಕ ಸ್ಥಳದಲ್ಲೇ ಸಾವು

0
image_editor_output_image-1130743031-1722927899178.jpg

ವಿಜಯಪುರ: ಶಾಲಾ ಬಸ್ ಹರಿದು 5 ವರ್ಷದ ಬಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ವಿಜಯಪುರ ಜಿಲ್ಲೆಯಲ್ಲಿ ನಡೆದಿದೆ.

ವಿಜಯಪುರ ಜಿಲ್ಲೆಯ ನೀಡಗುಂಡಿ ತಾಲೂಕಿನ ಅರಳದಿನ್ನಿ ಗ್ರಾಮದಲ್ಲಿ ಮನೆಯಿಂದ ಅಂಗನವಾಡಿಗೆ ಹೋಗುತ್ತಿದ್ದ ವೇಳೆ ಶಾಲಾ ಬಸ್ ಹರಿದು ಗ್ರಾಮದ 5 ವರ್ಷದ ಬಾಲಕ ಬಸವರಾಜ್ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

ಅಪಘಾತದ ಬಳಿಕ ಶಾಲಾ ಬಸ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.ಮಗನನ್ನು ಕಳೆದುಕೊಂಡ ಕುಟುಂಬದವರ ಆಕ್ರಂದನ ಮುಗಿಲುಮುಟ್ಟಿತ್ತು.

Leave a Reply

Your email address will not be published. Required fields are marked *

You may have missed

error: Content is protected !!