February 4, 2026

ಮಂಗಳೂರು: ಹೋಂ ಸ್ಟೇ ದಾಳಿ ಪ್ರಕರಣ: 12 ವರ್ಷದ ಬಳಿಕ ಎಲ್ಲಾ ಆರೋಪಿಗಳು ಖುಲಾಸೆ

0
n6254019991722958903506898dc5bd80f63fcb825303751c9d91cfc8219fc83578e3f00d863b7a52f8ba8b.jpg

ಮಂಗಳೂರು: ಪಡೀಲ್ ನಲ್ಲಿ 2012ರ ಜು. 28ರಂದು ನಡೆದಿದ್ದ ಹೋಂಸ್ಟೇ ದಾಳಿ ಪ್ರಕರಣದ ಎಲ್ಲಾ ಆರೋಪಿಗಳು ಖುಲಾಸೆಗೊಳಿಸಿ ಮಂಗಳೂರಿನ ಆರನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮಹತ್ವದ ತೀರ್ಪುನೀಡಿದೆ. ಸಾಕ್ಷ್ಯಾಧಾರಗಳ ಕೊರತೆಯಿಂದ ಎಲ್ಲಾ ಆರೋಪಿಗಳನ್ನು ಖುಲಾಸೆಗೊಳಿಸಿ ನ್ಯಾಯಾಲಯ ಆದೇಶ ಹೊರಡಿಸಿದೆ.

2012ರ ಜುಲೈ 28ರಂದು ನಗರದ ಪಡೀಲ್ ಬಳಿಯ ಮಾರ್ನಿಂಗ್ ಮಿಸ್ಟ್ ಹೋಂ ಸ್ಟೇ ಮೇಲೆ ದಾಳಿ ನಡೆದಿತ್ತು. ಹುಟ್ಟು ಹಬ್ಬದ ಪಾರ್ಟಿಯಲ್ಲಿ ನಿರತರಾಗಿದ್ದ ಯುವಕ-ಯುವತಿಯರ ಮೇಲೆ ಹಿಂದೂ ಜಾಗರಣಾ ವೇದಿಕೆಯ ಕಾರ್ಯಕರ್ತರು ದಾಳಿ ಮಾಡಿದ್ದರು ಎಂದು ಪೊಲೀಸರು ತಿಳಿಸಿದ್ದರು.

ದಾಳಿಯ ಬಗ್ಗೆ ಮಂಗಳೂರು ಗ್ರಾಮಾಂತರ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿ 44 ಆರೋಪಿಗಳ ವಿರುದ್ಧ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿದ್ದರು. ಈ ಪೈಕಿ ಮೂವರು ಆರೋಪಿಗಳು ಸಾವನ್ನಪ್ಪಿದ್ದಾರೆ. ಓರ್ವನ ಮೇಲಿನ ಪ್ರಕರಣ ಕೈಬಿಡಲಾಗಿತ್ತು. ವಕೀಲರಾದ ಶಂಭುಶರ್ಮಾ, ಕಿಶೋರ್ ಕುಮಾರ್ ಅವರ ತಂಡ ಆರೋಪಿಗಳ ಪರ ವಾದ ಮಂಡಿಸಿತ್ತು.

Leave a Reply

Your email address will not be published. Required fields are marked *

You may have missed

error: Content is protected !!