May 21, 2026

ಟಿಪ್ಪರ್ ಢಿಕ್ಕಿ: ಬೈಕ್ ಹಿಂಬದಿ ಕುಳಿತಿದ್ದ 8 ತಿಂಗಳ ಗರ್ಭಿಣಿ ಮೃತ್ಯು

0
image_editor_output_image1476731071-1723016871002.jpg

ನೆಲಮಂಗಲ: ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ಎಡೇಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ ನಾಲ್ಕರಲ್ಲಿ (NH 4) ಟಿಪ್ಪರ್ ಡಿಕ್ಕಿಯಾಗಿ ಬೈಕ್ ಹಿಂಬದಿ ಕುಳಿತಿದ್ದ ಗರ್ಭಿಣಿ ಮೃತಪಟ್ಟಿದ್ದಾರೆ.

ಹೊಟ್ಟೆಯಲ್ಲಿದ್ದ 8 ತಿಂಗಳ ಮಗು ಹೊರಗಡೆ ಬಂದು ವಿಲ ವಿಲ ಒದ್ದಾಡಿ ಸಾವನ್ನಪ್ಪಿದೆ. ಎಡೇಹಳ್ಳಿಯ ಸಿಂಚನಾ (30) ಮೃತದುರ್ದೈವಿ. ಸಿಂಚನಾ ಪತಿ ಮಂಜುನಾಥ್ ಪವಾಡ ಸದೃಶ ರೀತಿಯಲ್ಲಿ ಪಾರಾಗಿದ್ದಾರೆ.

ಅಪಘಾತದ ಬಳಿಕ ಸ್ಥಳದಲ್ಲೇ ಟಿಪ್ಪರ್ ನಿಲ್ಲಿಸಿ ಚಾಲಕ ಪರಾರಿಯಾಗಿದ್ದಾನೆ. ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!