March 24, 2026

ಮಡಿಕೇರಿ: ದರೋಡೆ ಪ್ರಕರಣ, 7 ಮಂದಿ ಆರೋಪಿಗಳ ಬಂಧ‌ನ

0
image_editor_output_image-877033076-1723097328903

ಮಡಿಕೇರಿ: ಸೋಮವಾರಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ಕಿಬ್ಬೆಟ್ಟ ಗ್ರಾಮದಲ್ಲಿ ನಡೆದಿದ್ದ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ೩ ಕೊಡಗು ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಒಟ್ಟು 7 ಆರೋಪಿಗಳನ್ನು ಬಂಧಿಸುವಲ್ಲಿ ಸೋಮವಾರಪೇಟೆ ಪೊಲೀಸರು ಯಶಸ್ವಿಯಾಗಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಕುದುಮಾರು ಗ್ರಾಮದ ಕೆ.ರೋಷನ್(32), ಕನ್ಯಾನ ನಿವಾಸಿ ಸತೀಶ್ ರೈ(54), ಪಡೂರು ಗ್ರಾಮದ ಕೆ.ಗಣೇಶ(28), ವೀರಕೆಂಬ ಗ್ರಾಮದ ಕುಸುಮಕರ(39), ವಿರಾಜಪೇಟೆ ಶಿವಕೇರಿಯ ಸೂರ್ಯಪ್ರಸಾದ್ ಬಿ.ಎ(43), ಸೋಮವಾರಪೇಟೆ ವೆಂಕಟೇಶ್ವರ ಬ್ಲಾಕ್ ನಿವಾಸಿ ವಿನೋದ್ ಕುಮಾರ್ ಹೆಚ್.ಪಿ(36) ಹಾಗೂ ಕುಶಾಲನಗರ ತಾಲ್ಲೂಕು ಹೆಬ್ಬಾಲೆ ಗ್ರಾಮದ ಬಿ.ಮೋಹನ್ ಕುಮಾರ್(45) ಬಂಧಿತ ಆರೋಪಿಗಳಾಗಿದ್ದಾರೆ.

ಆರೋಪಿಗಳ ಬಳಿಯಿಂದ 3.2 ಲಕ್ಷ ರೂ. ನಗದು, ಕೃತ್ಯಕ್ಕೆ ಬಳಸಿದ್ದ 2 ಕಾರುಗಳು ಮತ್ತು 9 ಮೊಬೈಲ್ ಫೋನ್‌ಗಳನ್ನು ವಶಕ್ಕೆ ಪಡೆಯಲಾಗಿದೆ. ಪ್ರಕರಣದಲ್ಲಿ ಶಾಮೀಲಾದ ಇತರ ಆರೋಪಿಗಳಿಗಾಗಿ ಶೋಧ ಕಾರ್ಯ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!