March 24, 2026

ಉಳ್ಳಾಲ: ಇಬ್ಬರು ಮಕ್ಕಳೊಂದಿಗೆ ತಾಯಿ ನಾಪತ್ತೆ

0
image_editor_output_image891128257-1723097398537.jpg

ಮಂಗಳೂರು: ಮಂಗಳೂರಿನ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಉಳ್ಳಾಲ ತೊಕ್ಕೊಟ್ಟು ಅಪಾರ್ಟ್‌ಮೆಂಟ್‌ವೊಂದರಲ್ಲಿ ವಾಸಿಸುತ್ತಿದ್ದ ತಾಯಿ ಹಾಗೂ ಮಕ್ಕಳಿಬ್ಬರು ನಾಪತ್ತೆಯಾಗಿದ್ದಾರೆ.

ಇಲ್ಲಿನ ಸ್ಕೈಹೈಟ್ಸ್‌ ಅಪಾರ್ಟ್‌ಮೆಂಟ್‌ ನಿವಾಸಿ ಮಂಜುಳಾ (31) ಮತ್ತು ಅವರ ಮಕ್ಕಳಾದ ಕೃಷ್ಣ (8) ಹಾಗೂ ಖುಷಿ (6) ನಾಪತ್ತೆಯಾದವರು. ಮಂಜುಳಾ ಅವರು ಜು. 29ರಂದು ಬೆಳಗ್ಗೆ 10 ಗಂಟೆಗೆ ಫ್ಲ್ಯಾಟ್‌ನಿಂದ ಹೊರಟಿದ್ದು, ಮಕ್ಕಳನ್ನು ಶಾಲೆಯಿಂದ ಕರೆದುಕೊಂಡು ಹೋಗಿದ್ದಾರೆ.

ಅವರ ಪತಿ ದ್ಯಾಮಣ್ಣ ಮೇಟಿ ಅವರು ಆ. 3ರಂದು ಉಳ್ಳಾಲ ಪೊಲೀಸ್‌ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!