August 22, 2026

ಬ್ಲ್ಯಾಕ್‌ಮೇಲ್ ಮಾಡಿ ವಿದ್ಯಾರ್ಥಿನಿಯಿಂದ ಸುಲಿಗೆ: ಆರೋಪಿಯ ಬಂಧನ

0
image_editor_output_image-1482537210-1723099342970.jpg

ಬೆಂಗಳೂರು: ಪ್ರೀತಿಯ ವಿಚಾರವನ್ನು ಕುಟುಂಬದವರಿಗೆ ಹೇಳುವುದಾಗಿ ಬ್ಲ್ಯಾಕ್‌ಮೇಲ್ ಮಾಡಿ ವಿದ್ಯಾರ್ಥಿನಿಯಿಂದ 75 ಗ್ರಾಂ ಚಿನ್ನಾಭರಣ ಹಾಗೂ 1.25 ಲಕ್ಷ ರೂ. ನಗದು ಸುಲಿಗೆ ಮಾಡಿದ್ದ ಆರೋಪಿಯನ್ನು ಸುಬ್ರ ಮಣ್ಯಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಚಿಕ್ಕಲಸಂದ್ರದ ಕಾಕ ತೀಯ ನಗರ ನಿವಾಸಿ ತೇಜಸ್‌ (19) ಬಂಧಿತ. ಆರೋಪಿಯಿಂದ 3.40 ಲಕ್ಷ ರೂ. ಮೌಲ್ಯದ 50 ಗ್ರಾಂ ಚಿನ್ನಾಭರಣ ಜಪ್ತಿ ಮಾಡಲಾಗಿದೆ.

ನಾಯ್ಡು ಲೇಔಟ್‌ ನಿವಾಸಿ ವಿದ್ಯಾರ್ಥಿನಿಯ ತಾಯಿ ಹೇಮಾ ಎಂಬುವರು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದರು.

Leave a Reply

Your email address will not be published. Required fields are marked *

You may have missed

error: Content is protected !!