ವಿನೇಶ್ ಫೋಗಟ್ ಗೆ 4 ಕೋಟಿ ರೂ. ಬಹುಮಾನ ಘೋಷಣೆ: ಬೆಳ್ಳಿ ಪದಕ ವಿಜೇತೆ ಮಾದರಿಯಲ್ಲಿ ಗೌರವಿಸಲು ಮುಂದಾದ ಸರ್ಕಾರ

ಚಂಡೀಗಢ: ಪ್ಯಾರಿಸ್ ಒಲಿಂಪಿಕ್ಸ್ ಫೈನಲ್ ಪಂದ್ಯಕ್ಕೂ ಮುನ್ನವೇ ಅನರ್ಹಗೊಂಡು ಕುಸ್ತಿಗೆ ವಿದಾಯ ಹೇಳಿದ ವಿನೇಶ್ ಫೋಗಟ್ ಅವರಿಗೆ ಹರಿಯಾಣ ಸರ್ಕಾರ 4 ಕೋಟಿ ರೂ. ಬಹುಮಾನ ಘೋಷಿಸಿದೆ.
ಇದರೊಂದಿಗೆ ಒಲಿಂಪಿಕ್ಸ್ ಬೆಳ್ಳಿ ಪದಕ ವಿಜೇತೆ ಮಾದರಿಯಲ್ಲೇ ಸ್ವಾಗತ ಕೋರಲು ಸಕಲ ಸಿದ್ಧತೆ ಮಾಡಿಕೊಳ್ಳುತ್ತಿದೆ. ಹರಿಯಾಣ ಮುಖ್ಯಮಂತ್ರಿ ನಯಾಬ್ ಸಿಂಗ್ ಸೈನಿ ಫೋಗಟ್ ಫೈನಲ್ ಅನರ್ಹ ನಂತರ ಭಾರೀ ದುಃಖ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಎಕ್ಸ್ ಖಾತೆಯಲ್ಲಿ ಹರಿಯಾಣ ಸಿಎಂ ನಯಾಬ್ ಸಿಂಗ್ ಸೈನಿ ಮಾಹಿತಿ ಹಂಚಿಕೊಂಡಿದ್ದಾರೆ. ಒಲಿಂಪಿಕ್ಸ್ ಫ್ರೀಸ್ಟೈಲ್ ಕುಸ್ತಿ ವಿಭಾಗದಲ್ಲಿ ಫೈನಲ್ ತಲುಪಿ ಇತಿಹಾಸ ನಿರ್ಮಿಸಿದ ವಿನೇಶ್ ಫೋಗಟ್ ಅವರನ್ನು ತವರಿನಲ್ಲಿ ಬೆಳ್ಳಿ ಪದಕ ವಿಜೇತರಾಗಿ ಗೌರವಿಸಲಾಗುವುದು ಎಂದು ಅವರು ಬರೆದುಕೊಂಡಿದ್ದಾರೆ.