ಪ್ಯಾರಿಸ್ ಒಲಿಂಪಿಕ್ಸ್: ಜಾವೆಲಿನ್ ಎಸೆತದಲ್ಲಿ ನೀರಜ್ ಚೋಪ್ರಾಗೆ ಬೆಳ್ಳಿ ಪದಕ
ಪ್ಯಾರಿಸ್: ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಚಿನ್ನದ ಪದಕ ಜಯಿಸಿದ್ದ ನೀರಜ್ ಚೋಪ್ರಾ, ಇದೀಗ ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಬೆಳ್ಳಿ ಪದಕ ಜಯಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಎರಡನೇ ಪ್ರಯತ್ನದಲ್ಲಿ ನೀರಜ್ ಚೋಪ್ರಾ 89.45 ಮೀಟರ್ ದೂರ ಜಾವೆಲಿನ್ ಎಸೆಯುವ ಮೂಲಕ ರಜತ ಪದಕ ತಮ್ಮದಾಗಿಸಿಕೊಂಡರು. ಇದರೊಂದಿಗೆ ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಭಾರತ 5ನೇ ಒಲಿಂಪಿಕ್ ಪದಕ ತಮ್ಮದಾಗಿಸಿಕೊಂಡಿದೆ. ಇನ್ನು ಇದು ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಭಾರತ ಜಯಿಸಿದ ಮೊದಲ ಬೆಳ್ಳಿ ಪದಕ ಎನಿಸಿದೆ. ನೆರೆಯ ಪಾಕಿಸ್ತಾನದ ಆರ್ಷದ್ ನದೀಮ್(92.97 ಮೀಟರ್) ಒಲಿಂಪಿಕ್ ದಾಖಲೆಯೊಂದಿಗೆ ಚಿನ್ನದ ಪದಕ ತಮ್ಮದಾಗಿಸಿಕೊಳ್ಳುವಲ್ಲಿ ಯಶಸ್ವಿಯಾದರು.




