March 24, 2026

ಪ್ರೇಮಿಗಳಿಬ್ಬರು ಒಂದೇ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ

0
image_editor_output_image186288161-1723182336188.jpg

ಮಹಾಲಿಂಗಪುರ: ನಾಗರಪಂಚಮಿ ಹಬ್ಬದ ಆ.9ರ ಶುಕ್ರವಾರ ಮುಂಜಾನೆ ಪ್ರೇಮಿಗಳಿಬ್ಬರು ಒಂದೇ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಹಾಲಿಂಗಪುರ ಸಮೀಪದ ನಂದಗಾಂವ ಗ್ರಾಮದಲ್ಲಿ ನಡೆದಿದೆ.

ರಬಕವಿ-ಬನಹಟ್ಟಿ ತಾಲೂಕಿನ ನಂದಗಾಂವ ಗ್ರಾಮದ ನಿವಾಸಿಗಳಾದ ಸಚಿನ್ ಭೀಮಪ್ಪ ದಳವಾಯಿ(22), ಪ್ರೀಯಾ ಮಲ್ಲಪ್ಪ ಮಡಿವಾಳ (19) ಆತ್ಮಹತ್ಯೆಗೆ ಶರಣಾದ ಪ್ರೇಮಿಗಳು.

ಹಾಲುಮತ ಸಮಾಜದ ಯುವಕ, ಲಿಂಗಾಯತ (ಅಗಸರ) ಸಮಾಜದ ಯುವತಿ ಹಲವು ದಿನಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು ಎನ್ನಲಾಗಿದ್ದು, ಗ್ರಾಮಸ್ಥರ ಕೈಗೆ ಸಿಕ್ಕಾಗ ಗ್ರಾಮದ ಹಿರಿಯರು ಇಬ್ಬರಿಗೂ ಬೈದು ಬುದ್ದಿವಾದ ಹೇಳಿದ್ದರು ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

error: Content is protected !!