February 2, 2026

ತೋಟಕ್ಕೆ ಕಬ್ಬಿಣದ ಏಣಿ ಕೊಂಡೊಯ್ಯುವಾಗ ವಿದ್ಯುತ್‌ ಸ್ಪರ್ಶ: ಕಾಫಿ ಬೆಳೆಗಾರ ಮೃತ್ಯು

0
image_editor_output_image662458411-1723183981106.jpg

ಚಿಕ್ಕಮಗಳೂರು: ತೋಟಕ್ಕೆ ಕಬ್ಬಿಣದ ಏಣಿಯನ್ನು ಕೊಂಡೊಯ್ಯುತ್ತಿದ್ದ ವೇಳೆ ಆಕಸ್ಮಿಕವಾಗಿ ವಿದ್ಯುತ್‌ ತಂತಿಗೆ ತಗುಲಿದ ಪರಿಣಾಮ ಕಾಫಿ ಬೆಳೆಗಾರನೋರ್ವ ಮೃತಪಟ್ಟಿರುವ ಘಟನೆ ಮೂಡಿಗೆರೆ ತಾಲೂಕಿನ ಬಾಳೂರು ಠಾಣಾ ವ್ಯಾಪ್ತಿಯ ಗಬ್ಬಲ್ ಗ್ರಾಮದಲ್ಲಿ ನಡೆದಿದೆ.

ಸಲ್ದಾನ(46) ಮೃಪಟ್ಟವರು. ಅವರು ಗುರುವಾರ ಮಧ್ಯಾಹ್ನ ಮನೆಯಿಂದ ವೇಳೆ ಗಬ್ಬಲ್ ಗ್ರಾಮದ ಶಾಲೆ ಪಕ್ಕ ಎತ್ತರದ ಪ್ರದೇಶದಲ್ಲಿರುವ ಕಾಫಿ ತೋಟಕ್ಕೆ ಏಣಿಯನ್ನು ಹೊತ್ತುಕೊಂಡು ಹೋಗುತ್ತಿದ್ದ ವೇಳೆ ಅಲ್ಲೇ ಹಾದು ಹೋಗಿದ್ದ ವಿದ್ಯುತ್ ತಂತಿಗೆ ಏಣಿ ತಗುಲಿದೆ. ಇದರಿಂದ ವಿದ್ಯುತ್‌ ಆಘಾತಕ್ಕೆ ಒಳಗಾಗಿ ಅವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.

ಸ್ಥಳಕ್ಕೆ ಮೆಸ್ಕಾಂ ಸಿಬ್ಬಂದಿ ಹಾಗೂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಾಳೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!