ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ ಅಶಿಸ್ತಿನ ವರ್ತನೆ: ಕುಸ್ತಿಪಟು ಅಂತಿಮ್ ಪಂಘಲ್ಗೆ 3 ವರ್ಷಗಳ ಕಾಲ ನಿಷೇಧ
ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಅಶಿಸ್ತಿನ ವರ್ತನೆ ತೋರಿದ್ದಕ್ಕಾಗಿ ಕುಸ್ತಿಪಟು ಅಂತಿಮ್ ಪಂಘಲ್ ಅವರನ್ನು ಭಾರತೀಯ ಒಲಿಂಪಿಕ್ ಸಂಸ್ಥೆ ಮೂರು ವರ್ಷಗಳ ಕಾಲ ನಿಷೇಧಿಸಿದೆ .
ಬುಧವಾರ ನಡೆದ ಮಹಿಳೆಯರ 53 ಕೆಜಿ ವಿಭಾಗದ ಆರಂಭಿಕ ಪಂದ್ಯದಲ್ಲಿ ಸೋತ ನಂತರ ಅಂತಿಮ್ ಫಂಘಲ್ ಒಲಿಂಪಿಕ್ಸ್ ನಿಂದ ಹೊರಗುಳಿದಿದ್ದರು. ಬಳಿಕ ಶಿಸ್ತು ಉಲ್ಲಂಘನೆಯನ್ನು ಫ್ರೆಂಚ್ ಅಧಿಕಾರಿಗಳು ತನ್ನ ಗಮನಕ್ಕೆ ತಂದ ನಂತರ ಭಾರತೀಯ ಒಲಿಂಪಿಕ್ ಅಸೋಸಿಯೇಷನ್ ಅವರನ್ನು ಮತ್ತು ಅವರ ಸಹಾಯಕ ಸಿಬ್ಬಂದಿಯನ್ನು ವಾಪಸ್ ಕಳುಹಿಸಲು ನಿರ್ಧರಿಸಿತು.