December 4, 2024

ಮಗುವಿನ ಮೇಲೆ ಬಿದ್ದ ನಾಯಿ: ಮಗು ಮೃತ್ಯು

0

ಥಾಣೆ : ತನ್ನ ತಾಯಿಯೊಂದಿಗೆ ರಸ್ತೆಯ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಪುಟ್ಟ ಮಗುವಿನ ಮೇಲೆ ನಾಯಿಯೊಂದು ಬಿದ್ದು ಮಗು ಸಾವನಪ್ಪಿದ ಘಟನೆ ಮುಂಬೈನಲ್ಲಿ ವರದಿಯಾಗಿದ್ದು, ಘಟನೆಯ ಸಿಸಿಟಿವಿ ವಿಡಿಯೋ ವೈರಲ್ ಆಗಿದೆ.

ಮುಂಬೈ ಮಹಾನಗರದ ಥಾಣೆಯಲ್ಲಿ ಈ ಘಟನೆ ನಡೆದಿದೆ. ಮೂರು ವರ್ಷದ ಮಗುವೊಂದು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದೆ.

ಮುಂಬೈನ ಮುಂಬ್ರಾ ಬಳಿಯ ಅಮೃತ್ ನಗರದ ಚಿರಾಗ್ ಮೆನ್ಸನ್ ಎಂಬ ಐದು ಅಂತಸ್ತಿನ ಕಟ್ಟಡದ ಫ್ಲ್ಯಾಟ್ ವೊಂದರಲ್ಲಿ ನಾಯಿ ಸಾಕಲಾಗಿತ್ತು. ಈ ನಾಯಿ ಮಂಗಳವಾರ ಸಂಜೆ ನಾಲ್ಕು ಗಂಟೆ ಹೊತ್ತಿಗೆ ಆಟವಾಡುತ್ತಾ ರಸ್ತೆಯ ಮೇಲೆ ಹಠಾತ್ ಎಗರಿ ಬಿದ್ದಿದೆ. ಈ ವೇಳೆ ಅಜ್ಜಿ ಹಾಗೂ ತಾಯಿಯೊಂದಿಗೆ ನಡೆದುಕೊಂಡು ಹೋಗುತ್ತಿದ್ದ ಪುಟ್ಟ ಮಗು ನಾಯಿಯ ಅಡಿಯಲ್ಲಿ ಸಿಲುಕಿದೆ.

Leave a Reply

Your email address will not be published. Required fields are marked *

error: Content is protected !!