ಹೊಸನಗರ: ಎರಡು ಪುಟ್ಟ ಮಕ್ಕಳನ್ನು ಬಾವಿಗೆ ಎಸೆದು ತಾನು ಕೂಡ ಬಾವಿಗೆ ಹಾರಿ ಮಹಿಳೆಯೋರ್ವಳು ಆತ್ಮಹತ್ಯೆ ಮಾಡಿಕೊಂಡ ಹೃದಯ ವಿದ್ರಾವಕ ಘಟನೆ ತಾಲೂಕಿನ ಮತ್ತಿಕೈ ವ್ಯಾಪ್ತಿಯಲ್ಲಿ ಆ.7ರ ಬುಧವಾರ ರಾತ್ರಿ ನಡೆದಿದೆ.
ಚಂಪಕಾಪುರ ನಿವಾಸಿ ರಾಜೇಶ್ ಎಂಬವರ ಪತ್ನಿ ವಾಣಿ(32), ಮಕ್ಕಳಾದ ಸಮರ್ಥ(12), ಸಂಪದ (6) ಮೃತರು. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.